ಚಿಕ್ಕಬಳ್ಳಾಪುರ,(ವಿಶ್ವ ಕನ್ನಡಿಗ ನ್ಯೂಸ್): ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿಯ ಆಡಳಿತಾಧಿಕಾರಿ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎನ್.ಮಂಜುಳಾ ಅವರು ಅಕ್ಟೋಬರ್ 18 ರಂದು ಜಿಲ್ಲಾ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ.
ಬೆಳಗ್ಗೆ 09:30 ಗಂಟೆಗೆ ಜಿಲ್ಲಾಸ್ಪತ್ರೆ ಹಿಂಭಾಗದಲ್ಲಿರುವ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ನಿರ್ಮಿಸಿರುವ ಸರ್ಕಾರಿ ಮೆಟ್ರಿಕ್ ನಂತರದ ಪದವಿಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ ಹೆಚ್ಚುವರಿ ಕಟ್ಟಡದ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಲಿದ್ದಾರೆ ಆನಂತರ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದ ಅಣಕನೂರು ಗ್ರಾಮದ ಬಳಿ ಪರಿಶಿಷ್ಟ ವರ್ಗಗಳ ಇಲಾಖೆಯ ಅಧೀನದಲ್ಲಿರುವ ಮೆಟ್ರಿಕ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಯನ್ನು ವೀಕ್ಷಿಸಲಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಹೊಸಹೂಡ್ಯ ಗ್ರಾಮದಲ್ಲಿ ಪ್ರಗತಿಯಲ್ಲಿರುವ ನೂತನ ಅಂಗನವಾಡಿ ಕಟ್ಟಡವನ್ನು ಪರಿಶೀಲಿಸಿ ಬಳಿಕ ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳ ಗ್ರಾಮ ಪಂಚಾಯಿತಿಯ ಅಪ್ಪೇಗೌಡನಹಳ್ಳಿ ಇಂದಿರಾಗಾಂಧಿ ವಸತಿಶಾಲೆಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ ಬಳಿಕ ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಶಿಡ್ಲಘಟ್ಟದ ಸಾರ್ವಜನಿಕ ಆಸ್ಪತ್ರೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧೀನದಲ್ಲಿ ನಡೆಯುತ್ತಿರುವ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನಡೆಯುತ್ತಿರುವ ಮೆಟ್ರಿಕ್ ನಂತರದ ಬಾಲಕೀಯರ ವಿದ್ಯಾರ್ಥಿನಿಲಯ, ಸರ್ಕಾರಿ ಉರ್ದು ಪ್ರೌಢಶಾಲೆಯ ಹೆಚ್ಚುವರಿ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿ ಮತ್ತು ಆಶ್ರಯ ಬಡಾವಣೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಚ್ಚುವರಿ ಶಾಲಾ ಕಟ್ಟಡಗಳ ನಿರ್ಮಾಣದ ಕಾಮಗಾರಿ ಮತ್ತು ವಾಲ್ಮೀಕಿ ಭವನದ ಕಟ್ಟಡದ ಕಾಮಗಾರಿಯನ್ನು ಪರಿಶೀಲಿಸಿ ಅನಂತರ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.