ಕಾಸರಗೋಡು (www.vknews.in) : ಬೇವಿಂಜದಲ್ಲಿ ಲೋಕೋಪಯೋಗಿ ಗುತ್ತಿಗೆದಾರರೊಬ್ಬರ ಮನೆಗೆ ಗುಂಡು ಹಾರಿಸಿದ ಪ್ರಕರಣದ ಆರೋಪಿ ಹಾಗೂ ಭೂಗತ ಪಾತಕಿ ರವಿ ಪೂಜಾರಿಯ ಬಲಗೈ ಬಂಟ ಶಾರ್ಪ್ ಶೂಟರ್ ನನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ವಿಭಾಗದ ಎಸಿಪಿ ಧನ್ಯ ನಾಯರ್ ಮತ್ತು ತಂಡ ಪೈವಳಿಗೆ ಮೂಲದ ಮುಹಮ್ಮದ್ ಹನೀಫ ಅಲಿಯಾಸ್ ಅಲಿ ಮುನ್ನಾ ಎಂಬಾತನನ್ನು ಬಂಧಿಸಿದೆ.
ಹಲವು ಪ್ರಕರಣಗಳಲ್ಲಿ ವಾರಂಟ್ ಪಡೆದ ನಂತರ ಬಂಧನ ಮಾಡಲಾಗಿದೆ. ಮುನ್ನಾ ಭೂಗತ ಪಾತಕಿ ರವಿ ಪೂಜಾರಿ ಮತ್ತು ಕಲಿಯೋಗೇಶ್ ತಂಡದ ಸದಸ್ಯ ಎಂದು ಪೊಲೀಸರು ತಿಳಿಸಿದ್ದಾರೆ. ಮುನ್ನಾ ವಿರುದ್ಧ ಕೊಣಾಜೆ ಮಂಗಳೂರು ಉತ್ತರ, ಪುತ್ತೂರು, ಬರ್ಕೆ, ವಿಟ್ಲ, ಉಳ್ಳಾಲ ಮತ್ತು ಬೆಂಗಳೂರು ವಿಮಾನ ನಿಲ್ದಾಣ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳಿವೆ.
2010 ಮತ್ತು 2013ರಲ್ಲಿ ಎರಡು ಬಾರಿ ಬೈವಿಂಜದಲ್ಲಿ ಲೋಕೋಪಯೋಗಿ ಗುತ್ತಿಗೆದಾರರೊಬ್ಬರ ಮನೆ ಮೇಲೆ ಗುಂಡಿನ ದಾಳಿ ನಡೆದಿತ್ತು. ಈ ಪ್ರಕರಣದ ಹೊರತಾಗಿ ಮುನ್ನಾ ವಿರುದ್ಧ ಮಂಜೇಶ್ವರ ಮತ್ತು ಕುಂಬಳೆಯಲ್ಲಿ ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಮುನ್ನಾ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆ ಹಾಗೂ ಪುತ್ತೂರಿನಲ್ಲಿ ಗುಂಡಿನ ದಾಳಿ ಪ್ರಕರಣವಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.