ಉಡುಪಿ,(ವಿಶ್ವ ಕನ್ನಡಿಗ ನ್ಯೂಸ್ ) : ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಯೋಜಿಸಿದ್ದ ವಿಶ್ವ ಬಂಟರ ಸಮ್ಮೇಳನ ಇತ್ತೀಚಿಗೆ ಉಡುಪಿಯಲ್ಲಿ ನಡೆಯಿತು ಅ.28 ಮತ್ತು 29 ರಂದು ನಡೆದ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ವಹಿಸಿದ್ದರು.ವಿಶ್ವ ಬಂಟರ ಸಾಂಸ್ಕೃತಿಕ ವೈಭವದ ಉದ್ಘಾಟನಾ ಕಾರ್ಯಕ್ರಮ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಶೆಟ್ಟಿ ತೆರೆದ ಮೈದಾನದಲ್ಲಿನ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ಭಾನುವಾರ ಮುಂಜಾನೆ ನೆರವೇರಿತು. ಹಾಗೂ ಕ್ರೀಡಾ ಕೂಟ ಅಜ್ರಾಕಾಡು ಮೈದಾನದಲ್ಲಿ ನಡೆಯಿತು ಇದಕ್ಕೂ ಮೊದಲು ಉಡುಪಿ ಬೋರ್ಡ್ ಹೈಸ್ಕೂಲ್ ಮೈದಾನ ದಿಂದ ಆಕರ್ಷಕ ಪಥ ಸಂಚಲನ ನಡೆಯಿತು . ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಕನ್ಯಾನ ಸದಾಶಿವ ಶೆಟ್ಟಿ, ತೋನ್ಸೆ ಆನಂದ ಶೆಟ್ಟಿ, ಶಶಿರೇಖಾ ಆನಂದ ಶೆಟ್ಟಿ, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಎಂ.ಆರ್.ಜಿ ಗ್ರೂಪ್ ನ ಕೆ.ಪ್ರಕಾಶ್ ಶೆಟ್ಟಿ, ಮಜಿ ಸಚಿವ ರಮಾನಾಥ ರೈ, ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಶಾಸಕರುಗಳಾದ ಅಶೋಕ್ ಕುಮಾರ್ ರೈ, ಯಶಪಾಲ್ ಸುವರ್ಣ , ಗಣೇಶ್ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಮುಂಬೈ ಕ್ರಿಕೆಟ್ ಅಸೋಸಿಯೇಷನ್ ನ ಡಾ.ಪಿ.ವಿ.ಶೆಟ್ಟಿ, ಸಂತೋಷ್ ಗುರು, ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ, ಅಭಯ ಚಂದ್ರ ಜೈನ್, ಜಿ.ಎ.ಭಾವ ಸೇರಿದಂತೆ ಹಲವು ಮುಖಂಡರು ಸೇರಿದ್ದರು
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.