ಉಡುಪಿ (www.vknews.in) : ನಗರದ ನೇಜಾರಿನಲ್ಲಿ ತಾಯಿ ಮತ್ತು ಮೂರು ಮಕ್ಕಳನ್ನು ಬರ್ಬರವಾಗಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ವ್ಯಕ್ತಿಯನ್ನು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಬಂಧಿಸಲಾಗಿದೆ. ಪ್ರವೀಣ್ ಬಂಧಿತ ಆರೋಪಿ, ಆತನನ್ನು ಉಡುಪಿಗೆ ಕರೆತರಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರವಿವಾರ ಬೆಳಗ್ಗೆ ಉಡುಪಿಯ ಮನೆಯೊಂದಕ್ಕೆ ನುಗ್ಗಿ ಒಂದೇ ಕುಟುಂಬದ ನಾಲ್ವರನ್ನು ಕೊಲೆಗೈದು ಆತ ಪರಾರಿ ಆಗಿದ್ದನು. ಈತ ಕಳೆದ ಎರಡು ದಿನಗಳಿಂದ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದನು. ಇಂದು ಮಧ್ಯಾಹ್ನ ಈತ ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರ ಇಲ್ಲವೇ ಆಂಧ್ರಕ್ಕೆ ತೆರಳಲು ಪ್ಲ್ಯಾನ್ ಮಾಡಿಕೊಂಡಿದ್ದನು. ಪೊಲೀಸರು ಆತನ ಟೆಕ್ನಿಕಲ್ ಎವಿಡನ್ಸ್ ಆಧರಿಸಿ ಬಂಧಿಸಿದ್ದಾರೆ.
ಮೊಬೈಲ್ ಟವರ್ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಸಿಆರ್ಪಿಎಫ್ ಸಿಬ್ಬಂದಿಯಾಗಿದ್ದು, ಮಂಗಳೂರು ಏರ್ಪೋರ್ಟಿನಲ್ಲಿ ಕೆಲಸ ಮಾಡುತ್ತಿದ್ದನು ಎಂಬುವುದು ಪ್ರಾಥಮಿಕ ಮಾಹಿತಿ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.