ಆಲುವಾ (www.vknews.in) : 5 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ಕ್ರೂರವಾಗಿ ಕೊಂದ ಆಶ್ಫಾಕ್ ಆಲಂ ಎಂಬ ವ್ಯಕ್ತಿಗೆ ಎರ್ನಾಕುಲಂ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಮರಣದಂಡನೆ ವಿಧಿಸಿ ಆದೇಶ ನೀಡಿದೆ.
ಜುಲೈ ತಿಂಗಳಲ್ಲಿ ಕೇರಳದ ಆಲುವಾ ಎಂಬಲ್ಲಿ ಬಿಹಾರದ ವಲಸೆ ಕಾರ್ಮಿಕರ ಪುತ್ರಿ 5 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಸ್ಥಳೀಯ ಮಾರುಕಟ್ಟೆಯ ಹಿಂಭಾಗದಲ್ಲಿ ಗೋಣಿಚೀಲದಲ್ಲಿ ಮೃತದೇಹ ಪತ್ತೆಯಾಗಿತ್ತು.
ಸಿಸಿಟಿವಿ ದೃಶ್ಯ ಆಧರಿಸಿ ತನಿಖೆ ನಡೆಸಿದ್ದ ಪೊಲೀಸರು ಅಪರಾಧಿಯನ್ನು ಸೆರೆ ಹಿಡಿದಿದ್ದರು. ಬಿಹಾರ ಮೂಲದ ವಲಸೆ ಕಾರ್ಮಿಕ ಆಶ್ಫಾಕ್ ಆಲಂಗೆ(28) ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ನ್ಯಾಯಾಧೀಶ ಕೆ. ಸೋಮನ್ ಮರಣದಂಡನೆ ಶಿಕ್ಷೆ ವಿಧಿಸಿದ್ದಾರೆ. ಆಲಂ ವಿರುದ್ಧ 16 ಪ್ರಕರಣಗಳು ದಾಖಲಾಗಿದ್ದು ಎಲ್ಲಾ ಪ್ರಕರಣಗಳಲ್ಲಿಯೂ ಆತ ತಪ್ಪಿತಸ್ಥ ಎಂದು ದೃಢಪಟ್ಟಿತ್ತು.
ಪೊಕ್ಸೊ ಕಾಯ್ದೆಗೆ 11 ವರ್ಷವಾದ ಇಂದು ಅಪರಾಧಿಗೆ ಗಲ್ಲು ಶಿಕ್ಷೆ ಘೊಷಣೆಯಾಗಿದೆ. ಮಕ್ಕಳ ದಿನಾಚರಣೆಯಂದು ಬಂದಿರುವ ತೀರ್ಪು ಮಕ್ಕಳ ಮೇಲೆ ದೌರ್ಜನ್ಯ ಎಸಗುವವರಿಗೆ ಎಚ್ಚರಿಕೆ ನೀಡಲಿದೆ ಎಂದು ಸಿಎಂ ಪಿಣರಾಯಿ ವಿಜಯನ್ ಅಭಿಪ್ರಾಯಪಟ್ಟಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.