(www.vknews.in) ಸಿಮ್ಸ್ ಅಭಿವೃದ್ದಿಗೆ ಅಗತ್ಯವಾದ ಪ್ರಸ್ತಾವನೆ ಸಲ್ಲಿಸಲು ವೈದ್ಯಕೀಯ ಶಿಕ್ಷಣ ಸಚಿವರ ಸೂಚನೆ
ಶಿವಮೊಗ್ಗ, ನವೆಂಬರ್ 11, (ಕರ್ನಾಟಕ ವಾರ್ತೆ) : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಅಗತ್ಯವಾದ ಮೂಲಭೂತ ಸೌಕರ್ಯ, ಹುದ್ದೆ ಭರ್ತಿ, ಅಭಿವೃದ್ದಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ ಆರ್ ಪಾಟೀಲ ಅಧಿಕಾರಿಗಳಿಗೆ ತಿಳಿಸಿದರು. ಇಂದು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು ಸಂಸ್ಥೆಯ ಅಭಿವೃದ್ದಿಗೆ ಪೂರಕವಾಗಿ ಅಧಿಕಾರಿ/ಸಿಬ್ಬಂದಿ ಕಾರ್ಯ ನಿರ್ವಹಿಸುವಂತೆ ತಿಳಿಸಿದರು. ರೇಡಿಯೋಲಜಿಸ್ಟ್ ಹುದ್ದೆಗೆ ಅರ್ಜಿ ಕರೆದು ನೇಮಕ ಮಾಡಬೇಕು. ಪಿಜಿ ನರ್ಸಿಂಗ್ ವಿದ್ಯಾರ್ಥಿನಿಲಯಕ್ಕೆ ಪ್ರಸ್ತಾವನೆ ಕಳುಹಿಸಿ, ಆಸ್ಪತ್ರೆಯಲ್ಲಿ ಆಂಕೋಸರ್ಜನ್, ನ್ಯೂರೋಸರ್ಜನ್, ನ್ಯೂರಾಲಜಿಸ್ಟ್ಗಳಿದ್ದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನೇಮಕ ಮಾಡಿಕೊಂಡು ಸೇವೆ ಒದಗಿಸಲು ತಿಳಿಸಿದರು. ಖಾಲಿ ಹುದ್ದೆ ಭರ್ತಿಗೆ ಡಿಪಿಸಿ ಸಿದ್ದಪಡಿಸಿ ಹುದ್ದೆಗಳ ಭರ್ತಿಗೆ ಕ್ರಮ ವಹಿಸಬೇಕು ಎಂದ ಅವರು ಆರೋಗ್ಯ ಇಲಾಖೆಯ ಖಾಲಿ ಹುದ್ದೆಗಳನ್ನು ಡಿಸಿ ಹಾಗೂ ಸಿಇಓ ಅರ್ಜಿ ಆಹ್ವಾನಿಸಿ ತುಂಬಲು ಸೂಚಿಸಿದರು
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.