ಮಂಗಳೂರು (www.vknews.in) : ನನ್ನನ್ನು ಜಾತಿ, ಧರ್ಮದ ಆಧಾರದಲ್ಲಿ ಯಾರು ಸಹ ಆ ಪೀಠದಲ್ಲಿ ಕೂರಿಸಿಲ್ಲ. ನಾನು ಎಲ್ಲರಿಗೂ ಸ್ಪೀಕರಾಗಿದ್ದು ಆ . ಸ್ಥಾನವನ್ನು ರಾಜಕೀಯ, ಜಾತಿ ಧರ್ಮದಿಂದ ತುಲನೆ ಮಾಡುವುದು ಸರಿಯಲ್ಲ ಎಂದು ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಸ್ಪೀಕರ್ ಯು.ಟಿ ಖಾದರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ಸ್ಪೀಕರ್ ಸ್ಥಾನದ ಬಗ್ಗೆ ಜಮೀರ್ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಎಲ್ಲವನ್ನು ಕೂಡ ಮೆಟ್ಟಿ ನಿಂತು ನೋಡಬೇಕಾದ ಸಂವಿಧಾನ ಬದ್ಧವಾದ ಸ್ಥಾನ ಇದಾಗಿದೆ. ನನಗೆ ಗೌರವ ಕೊಡುವುದು ಯು.ಟಿ ಖಾದರ್ ಗೆ ಗೌರವ ಕೊಡೋದು ಅಲ್ಲ. ಸ್ಪೀಕರ್ ಸ್ಥಾನವನ್ನು ಜಾತಿ ಧರ್ಮ ಬಿಟ್ಟು ನೋಡಬೇಕು. ಸಂವಿಧಾನ ಪೀಠಕ್ಕೆ ಮತ್ತು ಸಭಾಧ್ಯಕ್ಷ ಸ್ಥಾನಕ್ಕೆ ಹಾಗೂ ಅಲ್ಲಿ ಕೂರುವ ನಾವು ಗೌರವ ಉಳಿಸುವ ಕೆಲಸ ಮಾಡಬೇಕು ಎಂದರು.
ನನ್ನನ್ನು ಜಾತಿ, ಧರ್ಮದ ಆಧಾರದಲ್ಲಿ ಯಾರು ಸಹ ಆ ಪೀಠದಲ್ಲಿ ಕೂರಿಸಿಲ್ಲ. ಅರ್ಹತೆಗೆ ಅನುಗುಣವಾಗಿ ಸಂವಿಧಾನ ಬದ್ಧವಾಗಿ ಕೆಲಸ ನಿರ್ವಹಿಸುವ ವಿಶ್ವಾಸದಿಂದ ಕೂರಿಸಿದ್ದಾರೆ. ಸಂವಿಧಾನಕ್ಕೆ ಅನುಗುಣವಾಗಿ ಕೆಲಸ ಮಾಡುತ್ತೇನೆ. ನಾನು ಎಲ್ಲರಿಗೂ ಗೌರವ ಕೊಟ್ಟು ಗೌರವ ಪಡೆಯುತ್ತೇನೆ. ಎಲ್ಲರ ಸ್ಪೀಕರ್ ಆಗಿ ಕೆಲಸ ನಿರ್ವಹಿಸುತ್ತೇನೆ. ಎಂದು ಹೇಳಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.