(www.vknews.in) ಡಾ|| ಚೂಂತಾರು ಕಸಾಪ ರಾಜ್ಯ ಸಮಿತಿಗೆ ನೇಮಕ
ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಇದರ ಗೌರವ ಕಾರ್ಯದರ್ಶಿಗಳಾದ ಡಾ|| ಮುರಲೀ ಮೋಹನ್ ಚೂಂತಾರು ಅವರನ್ನು ಸಮಸ್ತ ಕನ್ನಡಿಗರ ಏಕಮಾತ್ರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಇದರ ಮಾರ್ಗದರ್ಶಿ ಸಮಿತಿಗೆ ಸದಸ್ಯರಾಗಿ ಕಸಾಪ ಇದರ ರಾಜ್ಯಾಧ್ಯಕ್ಷರಾದ ಶ್ರೀ ನಾಡೋಜ ಡಾ|| ಮಹೇಶ್ ಜೋಶಿ ಅವರು ದಿನಾಂಕ: 11-11-2023 ರಂದು ಆದೇಶ ನೀಡಿ ಪ್ರಕಟಣೆ ನೀಡಿರುತ್ತಾರೆ. ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕನ್ನಡಿಗರ ಮನೆ ಮನೆಗೂ ಕನ್ನಡ ಸಾಹಿತ್ಯ ಚಟುವಟಿಕೆಗಳನ್ನು ತಲುಪಿಸುವಲ್ಲಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಕಸಾಪ ಅಧ್ಯಕ್ಷರಾದ ಡಾ|| ನಾಡೋಜ ಮಹೇಶ್ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡಾ|| ಚೂಂತಾರು ಅವರು ಕಳೆದ ಇಪ್ಪತ್ತು ವರುಷಗಳಿಂದ ಕನ್ನಡ ವೈದ್ಯಕೀಯ ಸಾಹಿತ್ಯದಲ್ಲಿ ವಿಶೇಷವಾಗಿ ತೊಡಗಿಸಿಕೊಂಡಿದ್ದು, ಇವರೆಗೆ 14 ಕೃತಿಗಳನ್ನು ರಚಿಸಿ ವೈದ್ಯಕೀಯ ಸಾಹಿತಿ ಎಂದು ರಾಜ್ಯಾದ್ಯಂತ ಗುರುತಿಸಿಕೊಂಡಿರುತ್ತಾರೆ. ಅವರ ಕನ್ನಡ ಸಾಹಿತ್ಯ ಸೇವೆಗೆ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಅಕಾಡೆಮಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಅಕಾಡೆಮಿ ಇದರ ಪ್ರತಿಷ್ಠಿತ ವೈದ್ಯಕೀಯ ಸಾಹಿತ್ಯ ಪ್ರಶಸ್ತಿಗಳು ಈಗಾಗಲೇ ದೊರಕಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.