(www.vknews.in) ಬಡತನ ಮತ್ತು ಹಸಿವು ಇಂದಿನ ಸಮಾಜವನ್ನು ಬಾಧಿಸುತ್ತಿರುವ ಮಾರಕ ರೋಗಗಳು. ನಾಡಿನ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಉದ್ದೇಶದಿಂದ ಅನ್ನಭಾಗ್ಯ ಯೋಜನೆಯಡಿ ಬಡಕುಟುಂಬಗಳ ಪ್ರತಿ ಸದಸ್ಯನಿಗೆ ತಲಾ 10 ಕೆ.ಜಿ ಅಕ್ಕಿ ನೀಡುವ ಘೋಷಣೆ ಮಾಡಲಾಗಿತ್ತು. 5 ಕೆ.ಜಿ ಹೆಚ್ಚುವರಿ ಅಕ್ಕಿ ಲಭ್ಯವಿಲ್ಲದೇ ಇರುವುದರಿಂದ ರೂ. 170 ಅನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಈ ಉದ್ದೇಶಕ್ಕಾಗಿ ಒಟ್ಟು ರೂ. 2,444 ಕೋಟಿ ಹಣವನ್ನು ವಿನಿಯೋಗಿಸಲಾಗಿದೆ.
ಕಳೆದ 6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆ ನಮ್ಮ ಸರ್ಕಾರದ ಪ್ರಮುಖ ಉದ್ದೇಶ.
ಸಾಧಿಸಿದ್ದು ಹಲವು, ಸಾಗಬೇಕಾದ ಹಾದಿ ಬಹುದೂರ ಇದೆ. ಕರ್ನಾಟಕ ಅಭಿವೃದ್ಧಿ ಮಾದರಿಯ ಈ ಪಯಣದಲ್ಲಿ ಜೊತೆಯಾಗಿ ಸಾಗೋಣ, ನಾಡನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸೋಣ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.