ಕಾಸರಗೋಡು (www.vknews.in) : ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೈದಿದ್ದ ನಗರದ ವ್ಯಾಪಾರಿಯೋರ್ವರ ಮೃತದೇಹ ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಉಳಿಯತ್ತಡ್ಕ ಶಿರಿಬಾಗಿಲಿನ ಹಸೈನಾರ್ (46) ಎನ್ನಲಾಗಿದೆ. ತನ್ನ ಜೀವನ ಕೊನೆಗೊಳಿಸುವುದಾಗಿ ಕುಟುಂಬದ ವಾಟ್ಸಪ್ ಗ್ರೂಪ್ ನಲ್ಲಿ ಹಸೈನಾರ್ ಶುಕ್ರವಾರ ಮುಂಜಾನೆ ಸಂದೇಶ ಕಳುಹಿಸಿದ್ದರು ಎನ್ನಲಾಗಿದೆ.
ಚಂದ್ರ ಗಿರಿ ಸೇತುವೆಬದಿಯಲ್ಲಿ ಕಾರು ನಿಲ್ಲಿಸಿ ನದಿಗೆ ಹಾರಿದ್ದನ್ನು ಗಮನಿಸಿದ ವ್ಯಕ್ತಿಯೋರ್ವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಗಳು , ನಾಗರಿಕರು ಶೋಧ ನಡೆಸಿದ್ದು, ಇಂದು ಬೆಳಿಗ್ಗೆ ಮೃತ ದೇಹ ಪತ್ತಯಾಗಿದೆ. ಆರ್ಥಿಕ ಮುಗ್ಗಟ್ಟು ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.