ಮಂಗಳೂರು (www.vknews.in) : 19ನೇ ರಾಷ್ಟ್ರೀಯ ಹಿರಿಯರ ಈಜುಸ್ಪರ್ಧೆಯ ಆರಂಭದೊಂದಿಗೆ ನಗರದ ಎಮ್ಮೆಕೆರೆ ಪ್ರದೇಶದಲ್ಲಿ ಒಲಂಪಿಕ್ಸ್ ಮಾನದಂಡದ ಪ್ರಕಾರ ನಿರ್ಮಿಸಿರುವ ಅತ್ಯಾಧುನಿಕ ಈಜುಕೊಳ ಉದ್ಘಾಟನೆಗೊಂಡಿತು. ವಿವಿಧ ರಾಜ್ಯಗಳ ಈಜುಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಿದರು.
ಈಜುಕೊಳ ಉದ್ಘಾಟಿಸಿದ ನಗರಾಭಿವೃದ್ಧಿ ಸಚಿವ ಸುರೇಶ್ ಬಿ.ಎಸ್ ಮಾತನಾಡಿ, ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಆದಾಯ ಸೃಷ್ಟಿಸುವ ಯೋಜನೆಗಿಂತ ಹೆಚ್ಚಾಗಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದೆ. ಇನ್ನು ಮುಂದೆಯಾದರೂ ಮಹಾನಗರ ಪಾಲಿಕೆಯ ಯಾವುದಾದರೂ ಯೋಜನೆಯಡಿ ಆದಾಯ ವೃದ್ಧಿಸುವ ಕಾಮಗಾರಿ ಕೈಗೆತ್ತಿಕೊಳ್ಳೋಣ ಎಂದರು.
ಮಂಗಳೂರಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಟಿಯಿಂದ ನಿರ್ದಿಷ್ಟ ಯೋಜನೆ ರೂಪಿಸಿದರೆ ನಗರಾಭಿವೃದ್ಧಿ ಇಲಾಖೆಯಿಂದ ₹50 ಕೋಟಿ ಅನುದಾನವನ್ನು ಒದಗಿಸಲಾಗುವುದು. ರಾಜಕೀಯವನ್ನು ಚುನಾವಣೆಗೆ ಸೀಮಿತವಾಗಿಟ್ಟು ಎಲ್ಲರೂ ಸೇರಿ ಮಂಗಳೂರ ನಗರವನ್ನು ಪ್ರವಾಸೋದ್ಯಮದ ಹಿನ್ನೆಲೆಯಲ್ಲಿ ಅಭಿವೃದ್ಧಿ ಪಡಿಸಬೇಕಾಗಿದೆ ಎಂದು ಅವರು ಹೇಳಿದರು. ಸ್ಪೀಕರ್ ಯು.ಟಿ. ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಇನ್ನಿತರರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.