ಬೆಂಗಳೂರು (www.vknews.in) ; ರಾಮನಗರದಲ್ಲಿ ಕಾರು ಅಪಘಾತದಲ್ಲಿ ಕೇರಳದ ಯುವಕ ದಾರುಣ ಅಂತ್ಯ ಕಂಡಿದ್ದಾನೆ. ಮಲಪ್ಪುರಂ ಎಡಪಲ್ ಮಂಗಟೂರು ನಿವಾಸಿ ಅಬ್ದುಲ್ ಖಾದರ್ ಮತ್ತು ನಸೀಮಾ ದಂಪತಿಯ ಪುತ್ರ ಅಸ್ಲಾಂ (22) ಮೃತರು. ಅಪಘಾತದಲ್ಲಿ ಐವರು ಗಾಯಗೊಂಡಿದ್ದಾರೆ ಎಂದೂ ವರದಿಯಾಗಿದೆ. ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಐವರು ಸದಸ್ಯರ ತಂಡ ಬೆಂಗಳೂರಿಗೆ ತೆರಳುತ್ತಿದ್ದರು. ಗಂಭೀರವಾಗಿ ಗಾಯಗೊಂಡಿರುವ ಮಂಗಟೂರು ಮೂಲದ ಆದಿಲ್ (22) ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಸಣ್ಣಪುಟ್ಟ ಗಾಯಗಳೊಂದಿಗೆ ಇತರ ಪ್ರಯಾಣಿಕರು ಆಸ್ಪತ್ರೆಯಿಂದ ನಿರ್ಗಮಿಸಿದ್ದಾರೆ. ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಘಟನೆ ಸಂಬಂಧ ರಾಮನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೆಎಂಸಿಸಿ ಮೈಸೂರು ಏರಿಯಾ ಪ್ರಧಾನ ಕಾರ್ಯದರ್ಶಿ ನೌಶಾದ್ ಬಿಡದಿ, ಮುಸ್ಲಿಂ ಲೀಗ್ ರಾಮನಗರ ಜಿಲ್ಲಾ ಕಾರ್ಯದರ್ಶಿ ಅಫ್ಜಲ್ ಪಾರಮ್ಮಾಳ್ ಮತ್ತಿತರರು ರಕ್ಷಣಾ ಕಾರ್ಯಾಚರಣೆ ಮತ್ತು ಮುಂದಿನ ಕ್ರಮದ ನೇತೃತ್ವ ವಹಿಸಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.