ಕುಂದಾಪುರ ,(ವಿಶ್ವ ಕನ್ನಡಿಗ ನ್ಯೂಸ್ ):ನಗರದ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ನಡೆದ ಬೆಂಗಳೂರು ಕಂಬಳ ಕ್ರೀಡೆಯಲ್ಲಿ ಕಾಂತಾರ ಸಿನಿಮಾದಲ್ಲಿ ನಟ ರಿಷಬ್ ಶೆಟ್ಟಿ ಓಡಿಸಿದ್ದ ಅಪ್ಪುಮತ್ತು ಕಿಟ್ಟಿ ಎಂಬ ಕೋಣಗಳು ಕೆನೆ ಹಲಗೆ ವಿಭಾಗದಲ್ಲಿ ಪದಕ ಗೆದ್ದುಕೊಂಡಿವೆ.ಉಡುಪಿ ಜಿಲ್ಲೆಯ ಬೈಂದೂರಿನ ಪರಮೇಶ್ವರ್ ಭಟ್ ಅವರ ಅಪ್ಪು ಮತ್ತು ಕೆಟ್ಟಿ ಕೋಣಗಳು ಬೆಂಗಳೂರು ಕಂಬಳದಲ್ಲಿ ಭಾಗಿಯಾಗಿದ್ದವು ಕಾಂತಾರ ಸಿನಿಮಾದಲ್ಲಿ ಈ ಕೋಣಗಳು ಕಾಣಿಸಿಕೊಂಡಿದ್ದು, ನಟ ರಿಷಬ್ ಶೆಟ್ಟಿ ಕಾಂತಾರ ಸಿನಿಮಾದಲ್ಲಿ ಈ ಅಪ್ಪು ಮತ್ತು ಕಿಟ್ಟಿ ಕೋಣಗಳನ್ನು ಓಡಿಸಿ ಬಹುಮಾನವನ್ನು ಗೆಲ್ಲುತ್ತಾರೆ. ಇದೇ ಕೋಣಗಳು ಬೆಂಗಳೂರಿನ ಕಂಬಳ ಕ್ರೀಡೆಯಲ್ಲಿ ಮೊದಲ ಸ್ಥಾನ ಗೆದ್ದುಕೊಂಡಿವೆಬೈಂದೂರು ಬೋಳಂಬಳ್ಳಿಯ ‘ಶ್ರೀರಾಮ್ ಚೈತ್ರ ಪರಮೇಶ್ವರ್ ಭಟ್’ ಅವರ ಕೋಣಗಳು ಅರಮನೆ ಮೈದಾನದಲ್ಲಿ ಶರವೇಗದಲ್ಲಿ ಓಡಿ 6.5 ಕೋಲು ನಿಶಾನೆಗೆ ನೀರು ಹಾಯಿಸಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದೆ . ಬೆಂಗಳೂರು “ರಾಜ – ಮಹಾರಾಜ” ಜೋಡುಕರೆ ಕಂಬಳ ಕೂಟದ ಫಲಿತಾoಶ
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 07 ಜೊತೆ ಅಡ್ಡಹಲಗೆ: 06 ಜೊತೆ ಹಗ್ಗ ಹಿರಿಯ: 21 ಜೊತೆ ನೇಗಿಲು ಹಿರಿಯ: 32 ಜೊತೆ ಹಗ್ಗ ಕಿರಿಯ: 31 ಜೊತೆ ನೇಗಿಲು ಕಿರಿಯ: 62 ಜೊತೆ ಒಟ್ಟು ಕೋಣಗಳ ಸಂಖ್ಯೆ: 159 ಜೊತೆ ಕನೆಹಲಗೆ: ( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ ) ಬೊಳ್ಳಂಬಳ್ಳಿ ಚೈತ್ರ ಪರಮೇಶ್ವರ ಭಟ್ “ಬಿ” ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್ ಅಡ್ಡ ಹಲಗೆ: ಪ್ರಥಮ: ಎಸ್. ಎಮ್. ಎಸ್ ಫ್ಯಾಮಿಲಿ ಬೆಂಗಳೂರು ಹಲಗೆ ಮುಟ್ಟಿದವರು: ಭಟ್ಕಳ ಹರೀಶ್ ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ ಹಗ್ಗ ಹಿರಿಯ: ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಸಿ” ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ ಓಡಿಸಿದವರು: ಭಟ್ಕಳ ಶಂಕರ್ ನಾಯ್ಕ್ ಹಗ್ಗ ಕಿರಿಯ: ಪ್ರಥಮ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಕರಿಯ ಪೂಜಾರಿ ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್ ದ್ವಿತೀಯ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್ “ಎ” ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್ ನೇಗಿಲು ಹಿರಿಯ: ಪ್ರಥಮ: ಬಂಗಾಡಿ ಪರಂಬೇಲು ನಾರಾಯಣ ಮಲೆ ಕುಡಿಯ ಓಡಿಸಿದವರು: ಸರಪಾಡಿ ಧನಂಜಯ ಗೌಡ ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ ಓಡಿಸಿದವರು: ಪಟ್ಟೆ ಗುರು ಚರಣ್ ನೇಗಿಲು ಕಿರಿಯ: ಪ್ರಥಮ: ಜೈ ತುಳುನಾಡು ಪುತ್ತೂರು ಬೊಟ್ಯಾಡಿ ಕಿಶೋರ್ ಭಂಡಾರಿ ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ ದ್ವಿತೀಯ: ಎರ್ಮಾಳ್ ಪುಚ್ಚೊಟ್ಟುಬೀಡು ಬಾಲಚಂದ್ರ ಶೆಟ್ಟಿ ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.