ಬೆಳ್ತಂಗಡಿ (www.vknews.in) ; ಕಕ್ಕಿಂಜೆ-ನೆರಿಯ ರಸ್ತೆಯಲ್ಲಿ ಓಡಾಟ ನಡೆಸಿದ ಒಂಟಿ ಸಲಗ ಕಾರೊಂದರ ಮೇಲೆ ದಾಳಿ ನಡೆಸಿದ ಘಟನೆ ಸೋಮವಾರ ರಾತ್ರಿಯ ವೇಳೆ ಸಂಭವಿಸಿದೆ. ಆನೆ ಬರುವುದನ್ನು ನೋಡಿ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ. ಕಾರಿನ ಬಳಿ ಬಂದ ಕಾಡಾನೆ ಕಾರಿನ ಮೇಲೆ ದಾಳಿ ನಡೆಸಿದೆ. ಕಾರಿನ ಮುಂಭಾಗವನ್ನು ಮೇಲಕ್ಕೆತ್ತಿದೆ. ಆನೆಯ ದಾಳಿಗೆ ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದೆ ಎನ್ನಲಾಗಿದೆ, ಕಾರಿನಲ್ಲಿ ಆರು ಮಂದಿ ಪ್ರಯಾಣಿಕರು ಇದ್ದರು.
ಸೋಮವಾರ ಮುಂಜಾನೆ ಒಂಟಿ ಸಲಗ ತೋಟತ್ತಡಿ ಗ್ರಾಮದಲ್ಲಿ ತಿರುಗಾಟ ನಡೆಸುದನ್ನು ಊರಿನ ಜನರು ಗಮನಿಸಿದ್ದಾರೆ. ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಟತ್ತಡಿ ಗ್ರಾಮದ ಕಜೆಯ ಪರಿಸರದಿಂದ ಆಗಮಿಸಿದ ಕಾಡಾನೆ ಹಳೆ ಕಕ್ಕಿಂಜೆ, ಅಂತರ ಬೈಲು ಮೂಲಕ ಪೆರ್ನಾಳೆ ಅರಣ್ಯದ ಕಡೆ ಮುಂಜಾನೆ ಏಳು ಗಂಟೆ ವೇಳೆಗೆ ಸಾಗಿದೆ. ಇಲ್ಲಿನ ಅಶೋಕ ಜೈನ್ ಎಂಬವರ ಮನೆಯ ಸಮೀಪದಿಂದಲೇ ಕಾಡಾನೆ ಸಂಚಾರ ನಡೆಸಿತ್ತು.
ಇದೀಗ ಸಂಜೆಯ ವೇಳೆಗೆ ಆನೆ ರಸ್ತೆಯಲ್ಲಿಯೇ ಕಾಣಿಸಿಕೊಂಡು ವಾಹನದ ಮೇಲೆ ದಾಳಿ ನಡೆಸಿರುವುದರಿಂದ ಜನರಲ್ಲಿ ಆತಂಕ ಮೂಡಲು ಕಾರಣವಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆಗಳಿಂದಾಗಿ ಜನರು ಮನೆಯಿಂದ ಹೊರಬರಲು ಭಯಪಡುವಂತಹ ವಾತಾವರಣ ನಿರ್ಮಾಣವಾಗಿದೆ ಎನ್ನಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.