ಬ್ರಹ್ಮಾವರ (www.vknews.in) : ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ಬೇಳೂರುಜೆಡ್ಡು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಪ್ರೀತಮ್ ಅಂತೋನಿ ಡಿಸಿಲ್ವ (30) ಮೃತಪಟ್ಟವರು.
ಪ್ರೀತಮ್ ಅಂತೋನಿ ಡಿಸಿಲ್ವ ಅವರು ತೆರಳುತ್ತಿದ್ದ ಬೈಕಿಗೆ ಕುಂದಾಪುರ ಕಡೆಯಿಂದ ಬ್ರಹ್ಮಾವರ ಕಡೆಗೆ ಬರುತ್ತಿದ್ದ ದುರ್ಗಾಂಬ ಬಸ್ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಸ್ಸಿನಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡ ಪ್ರೀತಮ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.