ಉಳ್ಳಾಲ (www.vknews.in) ; ಹರೇಕಳ ಪಾವೂರು ಬಳಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯನ್ನು ಆಧರಿಸಿ ಉಳ್ಳಾಲ ಠಾಣೆಯ ಇನ್ ಸ್ಪೆಕ್ಟರ್ ಬಾಲಕೃಷ್ಣ ನೇತೃತ್ವದ ಪೊಲೀಸರು ಮತ್ತು ಗಣಿ ಹಾಗೂ ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಸಹಯೋಗದಲ್ಲಿ ಇಂದು ಬೆಳಗ್ಗೆ ದಾಳಿ ನಡೆಸಿ ದೋಣಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸಮೀಪದ ಮನೆಗಳಿಗೆ ನೇತ್ರಾವತಿ ನದಿಯಿಂದ ದೋಣಿಗಳ ಮೂಲಕ ಮರಳು ತಂದು ದಡದಲ್ಲಿ ಸಂಗ್ರಹಿಸಿ ಸಾಗಾಟ ಮಾಡುತ್ತಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಮರಳು ಸಹಿತ ನಾಲ್ಕು ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ..
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.