ಕೋಲಾರ ( ವಿಶ್ವ ಕನ್ನಡಿಗ ನ್ಯೂಸ್ ): ವಿಶ್ವಮಾನವ ಕುವೆಂಪು ವಿಚಾರಧಾರೆಗಳು ಮನುಷ್ಯರ ಮನಸ್ಸಿನಲ್ಲಿರುವ ಕ್ಷೇಶಗಳನ್ನು ತೊಳೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಷರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸುನಿಲ್ ಎಸ್ ಹೊಸಮನಿ ಅವರು ಅಭಿಪ್ರಾಯಪಟ್ಟರು. ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ, ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆಯಲ್ಲಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಕುವೆಂಪು ಯಾವುದೇ ಜಾತಿಗೆ ಸೇರಿದವರಲ್ಲದವರು. ವೈಚಾರಿಕ ಪ್ರಜ್ಞೆಯೊಂದಿಗೆ ಪೂರ್ಣ ಅರಳಿದ ಬದುಕು ಅವರದಾಗಿತ್ತು. ಅನುಭವದ ಆಳಕ್ಕೆ ಇಳಿದು ಕವಿಯಾಗಿ ಜಗತ್ತಿಗೆ ವಿಚಾರಧಾರೆಗಳನ್ನು ಹಂಚುವ ಮೂಲಕ ವಿಶ್ವಕ್ಕೆ ಉತ್ತಮ ಸಂದೇಶಗಳನ್ನು ನೀಡಿ ಮನುಕುಲದಲ್ಲಿ ಅಜರಾಮರಾಗಿ ಉಳಿದದರು ವಿಶ್ವಮಾನವನಾಗಿ ಎಲ್ಲರ ಮನೆ ಮನದಲ್ಲಿ ಉಳಿದುಕೊಂಡಿರುವ ಇಂತಹ ಮಹಾನ್ ಸಂತನನ್ನು ನೆನೆಯುವುದೇ ನಮ್ಮೆಲ್ಲರ ಭಾಗ್ಯ ಎಂದು ಸ್ಮರಿಸಿದರು ಯಾವ ವ್ಯಕ್ತಿ ಎಲ್ಲಿ ಹೋದರೂ,ದೈವತ್ವದ ದೃಷ್ಟಿಯಿರಿಸಿಕೊಂಡಿರುತ್ತಾನೋ ಆತ ಮಾತ್ರ ವಿಶ್ವಮಾನವನಾಗಲು ಸಾಧ್ಯ ಅಂತಹ ವ್ಯಕ್ತಿತ್ವ ಕುವೆಂಪು ಅವರಲ್ಲಿ ಇತ್ತು ಎಂದು ಹೇಳಿದರು. ಸಮಾರಂಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಭಾಸ್ಕರ್, ಸಹಾಯಕ ಕಮಿಷನರ್ ವೆಂಕಟಲಕ್ಷ್ಮಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಗೀತಾ, ಒಕ್ಕಲಿಗರ ಸಂಘದ ಅಧ್ಯಕ್ಷರಾದ ಕೆ. ವಿ. ಶಂಕರಪ್ಪ ವಕೀಲರ ಸಂಘದ ಅಧ್ಯಕ್ಷರಾದ ಮುನೇಗೌಡ, ಸಮಾಜ ಸೇವಕರಾದ ಸಿಎಂಆರ್ ಶ್ರೀನಾಥ್, ಉಪನ್ಯಾಸಕರಾದ ನಾಗಾನಂದ್, ಚುಟುಕು ಸಾಹಿತ್ಯ ಸಂಘದ ಅಧ್ಯಕ್ಷರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.