ಕಠ್ಮಂಡು (www.vknews.in) ; ನೇಪಾಳದ ರಾಪ್ತಿ ನದಿಗೆ ಪ್ರಯಾಣಿಕರ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಭಾರತೀಯರು ಸೇರಿದಂತೆ 12 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ. ನೇಪಾಲಗಂಜ್ನಿಂದ ಕಠ್ಮಂಡುವಿಗೆ ತೆರಳುತ್ತಿದ್ದ ಬಸ್ ಲುಂಬಿನಿ ಪ್ರಾಂತ್ಯದಲ್ಲಿ ಅಪಘಾತಕ್ಕೀಡಾಗಿದೆ. ಶುಕ್ರವಾರ ಮಧ್ಯರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಉಪ ನಿರೀಕ್ಷಕ ಸುಂದರ್ ತಿವಾರಿ ತಿಳಿಸಿದ್ದಾರೆ. ಅಪಘಾತದ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಎಂದು ಅವರು ಹೇಳಿದ್ದಾರೆ.
ಈಸ್ಟ್ ವೆಸ್ಟ್ ಹೆದ್ದಾರಿಯಿಂದ ನದಿಗೆ ಬಸ್ ಪಲ್ಟಿಯಾಗಿದೆ ಎಂದು ಕಠ್ಮಂಡು ಪೋಸ್ಟ್ ವರದಿ ಮಾಡಿದೆ. ಅಪಘಾತದಲ್ಲಿ 23 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನೇಪಾಳ ಗಂಜ್ ವೈದ್ಯಕೀಯ ಬೋಧನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕ ಲಾಲ್ ಬಹದ್ದೂರ್ ನೇಪಾಳಿ (28) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.