ಬಂಟ್ವಾಳ (www.vknews. in) : ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ೩ ನೇ ದಿನ ರಾಜ್ಯ ಸಾರಿಗೆ ಹಾಗೂ ಧಾರ್ಮಿಕ ದತ್ತಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಅವರು ಭೇಟಿ ನೀಡಿ ದೇವರ ದರ್ಶನ ಪಡೆದು ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡರು.
ಬಳಿಕ ಮಾತನಾಡಿದ ಅವರು ಸರಪಾಡಿ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಭಕ್ತರು ಹಾಗೂ ಬಿ.ರಮಾನಾಥ ರೈ ಅವರ ಮನವಿಯಂತೆ ಮಾರ್ಚ್ ತಿಂಗಳ ಬಜೆಟ್ ಬಳಿಕ ಸರಕಾರದಿಂದ ಗರಿಷ್ಠ ಪ್ರಮಾಣದ ಅನುದಾನ ಒದಗಿಸಲಾಗುವುದು ಎಂದರು.
ಮಾಜಿ ಸಚಿವ ಬಿ.ರಮಾನಾಥ ರೈ ಅವರು ಸಚಿವರನ್ನು ಗೌರವಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಂ.ಎಸ್.ಶೆಟ್ಟಿ ಸರಪಾಡಿ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿವಿಯ ಸಂಚಾಲಕಿ ಬ್ರಹ್ಮಕುಮಾರಿ ವಿಶ್ವೇಶ್ವರಿ ಅವರು ಧಾರ್ಮಿಕ ಉಪನ್ಯಾಸ ನೀಡಿದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಅಲ್ಲಿಪಾದೆ ಚರ್ಚ್ ಧರ್ಮಗುರು ಫಾ| ಫೆಡ್ರಿಕ್ ಮೊಂತೇರೊ, ದ.ಕ.ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಮಾಜಿ ಉಪಾಧ್ಯಕ್ಷ ಸಂತೋಷ್ಕುಮಾರ್ ರೈ, ಜಿ.ಪಂ.ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಿ.ಪದ್ಮಶೇಖರ್ ಜೈನ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಕಾವೂರು ಸಿ.ಎ ಬ್ಯಾಂಕ್ ಅಧ್ಯಕ್ಷ ಹರಿಶ್ಚಂದ್ರ, ಉದ್ಯಮಿಗಳಾದ ಪುರುಷೋತ್ತಮ ಶೆಟ್ಟಿ, ಚಂದ್ರಹಾಸ ಅಡ್ಯಂತಾಯ, ದಯಾನಂದ ಕಾರಂತ, ಸುನೀಲ್ ಬಿ.ಆಚಾರ್ಯ, ಕಾವೂರು ಬಂಟರ ಸಂಘದ ಅಧ್ಯಕ್ಷ ಆನಂದ ಶೆಟ್ಟಿ, ನ್ಯಾಯವಾದಿ ದಯಾನಂದ ರೈ, ಮೊಕ್ತೇಸರರಾದ ಉಮೇಶ್ ಆಳ್ವ, ವಿಠಲ್ ಎಂ, ಬ್ರಹ್ಮಕಲಶ ಸಮಿತಿ ಪ್ರಧಾನ ಕಾರ್ಯದರ್ಶಿ ಸರಪಾಡಿ ಅಶೋಕ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಕಾವೂರು ಮೊಗ್ರೋಡಿ ಕನ್ಸ್ಟೃಕ್ಷನ್ ಮಾಲಕ ಸುಧಾಕರ ಶೆಟ್ಟಿ ಹಾಗೂ ಸಿವಿಲ್ ಎಂಜಿನಿಯರ್ ಶರತ್ ಗಾಣದಕೊಟ್ಯ ಅವರನ್ನು ಸಮ್ಮಾನಿಸಲಾಯಿತು. ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ಸ್ವಾಗತಿಸಿ, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಪುರುಷೋತ್ತಮ ಪೂಜಾರಿ ಮಜಲು ವಂದಿಸಿದರು. ಉದಯ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.