ಶಿವಮೊಗ್ಗ (www.vknews.in) : ಬಿವೈ ರಾಘವೇಂದ್ರ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲೂ ಗೆಲ್ಲಬೇಕು. ಅವರನ್ನು ಆಯ್ಕೆ ಮಾಡುವುದು ಜನರ ಕರ್ತವ್ಯ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಶಿವಮೊಗ್ಗದ ಬೆಕ್ಕಿನ ಕಲ್ಮಠದಲ್ಲಿ ಬಸವಶ್ರೀ ಪ್ರಶಸ್ತಿ ಸ್ವೀಕಾರ ಮಾಡಿದ ನಂತರ ಮಾತನಾಡಿದ ಅವರು, ಜಿಲ್ಲೆಯ ಜನರು ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ. ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಆಗಿದೆ. ಜನರ ಅಭಿಲಾಷೆಯಂತೆ ರಾಘವೇಂದ್ರ ಅವರು ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಮುಂದಿನ 2-3 ತಿಂಗಳಿನಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಮುಂದೆಯೂ ರಾಘವೇಂದ್ರರನ್ನು ಆಯ್ಕೆ ಮಾಡಬೇಕಿರುವುದು ಜನರ ಕರ್ತವ್ಯ ಎಂದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.