ಬಂಟ್ವಾಳ (www.vknews. in) : ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಿಸಿರೋಡಿನ ಆಡಳಿತ ಸೌಧದ ಮುಂಭಾಗದಲ್ಲಿ ಗಣರಾಜೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಉಪಸ್ಥಿತಿಯಲ್ಲಿ ತಹಶಿಲ್ದಾರ್ ಬಿ.ಎಸ್.ಕೂಡಲಗಿ ಧ್ವಜಾರೋಹಣ ಮಾಡಿದರು.
ಧ್ವಜಾರೋಹಣಕ್ಕೂ ಮುನ್ನ ಪೊಲೀಸ್, ಶಾಲಾ ವಿದ್ಯಾರ್ಥಿಗಳು ಹಾಗೂ ಬಂಟ್ವಾಳ ತಾಲೂಕಿನ ನಿವೃತ್ತ ಸೈನಿಕರ ಸಂಘದ ವತಿಯಿಂದ ಆಕರ್ಷಕ ಪಥಸಂಚಲನ ನಡೆಯಿತು. ಬಳಿಕ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ ಆಚರಣೆ ಗಣರಾಜೋತ್ಸವ ಅಂಗವಾಗಿ ನಡೆಯುವ ಈ ವರ್ಷದ ಕಾರ್ಯಕ್ರಮ ನೂತನವಾಗಿ ಉದ್ಘಾಟನೆಗೊಂಡ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯುತ್ತಿರುವುದು ತುಂಬಾ ಸಂತೋಷ ತಂದಿದೆ ಎಂದರು.
ಶಿಕ್ಷಣ ಸಂಯೋಜಕಿ ಸುಜಾತಾ ಕುಮಾರಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆಗೈದ ತಾಲೂಕಿನ ಅನೇಕ ವಿದ್ಯಾರ್ಥಿಗಳನ್ನು ಹಾಗೂ ನಿವೃತ್ತ ಸೈನಿಕರಾದ ವೆಂಕಪ್ಪ ಗೌಡ, ಬಾಲಕೃಷ್ಣ ರೈ ಒಕ್ಕೆತ್ತೂರು, ಮೋನಪ್ಪ ಪೂಜಾರಿ ನರಿಕೊಂಬು, ಕರಿಬಸಪ್ಪ, ಕರುಣಾಕರ ಎಸ್, ಅವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.
ನಿವೃತ್ತ ಸೈನಿಕರ ಬಂಟ್ವಾಳ ತಾಲೂಕು ಅಧ್ಯಕ್ಷ ವೆಂಕಪ್ಪ ಗೌಡ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿ.ಸೋಜ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ. ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.