ದೆಹಲಿ (www.vknews.in) : ದೆಹಲಿಯ ಕಲ್ಕಾಜಿ ಮಂದಿರದಲ್ಲಿ ದೇವಸ್ಥಾನದ ಕಾರ್ಯಕ್ರಮದ ವೇಳೆ ವೇದಿಕೆ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಹದಿನೇಳು ಮಂದಿ ಗಾಯಗೊಂಡಿದ್ದಾರೆ. ಮಧ್ಯಾಹ್ನ 12.30ರ ಸುಮಾರಿಗೆ ಈ ಘಟನೆ ನಡೆದಿದೆ. ದೇವಸ್ಥಾನದಲ್ಲಿ ಉತ್ಸವ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ತಾತ್ಕಾಲಿಕವಾಗಿ ನಿರ್ಮಿಸಿದ್ದ ವೇದಿಕೆಗೆ ತಡೆಗೋಡೆಗಿಂತ ಹೆಚ್ಚು ಮಂದಿ ನುಗ್ಗಿರುವುದು ಅವಘಡಕ್ಕೆ ಕಾರಣವಾಗಿದೆ. ಅವಘಡದಲ್ಲಿ ವೇದಿಕೆ ಹತ್ತಿದವರಿಗೆ ಹಾಗೂ ಪಕ್ಕದಲ್ಲಿ ನಿಂತಿದ್ದವರಿಗೆ ಗಾಯಗಳಾಗಿವೆ. ಘಟನೆ ನಡೆದ ಸ್ಥಳದಲ್ಲಿ ಸುಮಾರು ಐನೂರಕ್ಕೂ ಹೆಚ್ಚು ಜನ ಸೇರಿದ್ದರು ಎಂಬುದು ಪ್ರಾಥಮಿಕ ಮಾಹಿತಿ.
ನೂಕುನುಗ್ಗಲು ಗಮನಿಸಿ ಪೊಲೀಸರು ಭದ್ರತಾ ವ್ಯವಸ್ಥೆ ಮಾಡಿದ್ದರು. ಆದರೆ ಕಾರ್ಯಕ್ರಮಕ್ಕೆ ಪೊಲೀಸರ ಅನುಮತಿ ಇರಲಿಲ್ಲ. ಗಾಯಾಳುಗಳನ್ನು ದೆಹಲಿ ಏಮ್ಸ್ ಮತ್ತು ಸಫ್ದರ್ಜಂಗ್ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರು ಮಧ್ಯವಯಸ್ಸಿನ ಮಹಿಳೆಯಾಗಿದ್ದು, ಮೃತದೇಹವನ್ನು ಖಾಸಗಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ಪೊಲೀಸರು ಸಂಘಟಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.