ಬಂಟ್ವಾಳ (www.vknews.in) : ಗುಡ್ಡವೊಂದರಲ್ಲಿ ಹುಲ್ಲುಗಾವಲಿಗೆ ಬೆಂಕಿ ನೀಡಲು ಹೋದ ಪತಿ ಪತ್ನಿ ಇಬ್ಬರೂ ಸಜೀಹ ದಹನಗೊಂಡ ಘಟನೆ ಬಂಟ್ವಾಳ ತಾಲೂಕಿನ ಲೋರೆಟ್ಟೋ ಸಮೀಪದ ತುಂಡು ಪದವು ಎಂಬಲ್ಲಿ ಭಾನುವಾರ ಮಧಾಹ್ನ ವೇಳೆ ನಡೆದಿದೆ.
ಲೊರೆಟ್ಟೊಪದವು ಸಮೀಪದ ತುಂಡುಪದವು ನಿವಾಸಿ, ಕ್ರಿಸ್ಟಿನ್ ಕಾರ್ಲೋ( 51), ಹಾಗೂ ಗಿಲ್ಬರ್ಟ್ ಕಾರ್ಲೊ (65) ಮೃತಪಟ್ಟವರು. ಇವರ ಮನೆಯ ಸಮೀಪದ ಗುಡ್ಡದಲ್ಲಿರುವ ಮುಳಿ ಹುಲ್ಲು ತೆಗೆಯುವ ಉದ್ದೇಶದಿಂದ ಅದಕ್ಕೆ ಬೆಂಕಿ ನೀಡಿದ್ದರು. ಮಧ್ಯಾಹ್ನ ಅಗಿದ್ದ ಕಾರಣ ಬೆಂಕಿಯ ಜ್ವಾಲೆ ಇವರಿಗೆ ಹತ್ತಿಕೊಂಡಿರಬೇಕು ಎಂದು ಹೇಳಲಾಗಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.