ಮಂಜೇಶ್ವರಂ (www.vknews.in) : ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ಬಂದ 17 ವರ್ಷದ ಬಾಲಕಿ ಗರ್ಭಿಣಿ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಮಂಜೇಶ್ವರಂ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಶಿರಿಯಾ ಮೂಲದ ಉನೈದ್ (25) ಬಂಧಿತ ಆರೋಪಿ.
ಈತ ಹುಡುಗಿಯ ಮನೆಗೆ ನಿತ್ಯ ಭೇಟಿ ನೀಡುತ್ತಿದ್ದನು. ಬಾಲಕಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಲವು ಬಾರಿ ಬಂದು ಅತ್ಯಾಚಾರವೆಸಗಿದ್ದಾರೆ ಎಂದು ಬಾಲಕಿ ತಿಳಿಸಿದ್ದಾರೆ.
ವಾರದ ಹಿಂದೆ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದಾಗ ನಾಲ್ಕು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ಅಧಿಕಾರಿಗಳು ಮಂಜೇಶ್ವರಂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಉನೈದ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ರಿಮಾಂಡ್ ಮಾಡಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.