ದುಬೈ(ವಿಶ್ವ ಕನ್ನಡಿಗ ನ್ಯೂಸ್): ರಾಸ್ ಅಲ್ ಖೈಮಾದ ನಾಗರಿಕ ವಿಮಾನಯಾನ ವಿಭಾಗದ ಅಧ್ಯಕ್ಷ ಹಾಗೂ ಅಲ್ ಖೈರ್ ಸ್ವಯಂಸೇವಕ ಪ್ರಶಸ್ತಿಯ ಅಧ್ಯಕ್ಷರಾದ ಇಂಜಿನಿಯರ್ ಶೇಖ್ ಸಲೇಮ್ ಬಿನ್ ಸುಲ್ತಾನ್ ಅಲ್ ಖಾಸಿಮಿ ಅವರ ಸಮ್ಮುಖದಲ್ಲಿ ಹಟ್ಟಾ ಹನಿ ಬೀ ಗಾರ್ಡನ್, ದುಬೈನಲ್ಲಿ ನಡೆದ ಅಲ್ ಖೈರ್ ಸ್ವಯಂಸೇವಕ ಪ್ರಶಸ್ತಿಯ ಎಂಟನೇ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಈ ವರ್ಷ ಯು.ಎ.ಇ.ಯ 50 ಜನರನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.47 ಮಂದಿ ಯು.ಎ.ಇ ನಾಗರಿಕರಾದರೆ ಮೂವರು ಹೊರ ದೇಶದವರನ್ನು ಗುರುತಿಸಲಾಗಿತ್ತು.ಮಹಮ್ಮದ್ ಹನೀಫ್ ಪುತ್ತೂರು ಮಾತ್ರ ಏಕೈಕ ಭಾರತೀಯರು ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಕನ್ನಡದ ಪುತ್ತೂರಿನವರು. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಲ್ ಖೈರ್ ಸ್ವಯಂಸೇವಕ ಪ್ರಶಸ್ತಿಯ ಡೆಪ್ಯೂಟಿ ಚೇರ್ಮನ್ ಫಿರಾಸ್ ಅಝೀಝ್ ಬಿನ್ ದರ್ವಿಶ್ ಹಾಗೂ ಸಂಸ್ಥೆಯ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಯು.ಎ.ಇ ಯ ಯೂನಿವರ್ಸಿಟಿ ಆಫ್ ದುಬೈ ಇದರ ಐಟಿ ಮ್ಯಾನೇಜರ್ ಹಾಗೂ ಮಹಮ್ಮದ್ ಬಿನ್ ರಾಶೀದ್ ಬಾಹ್ಯಾಕಾಶ ಸಂಸ್ಥೆಯಲ್ಲಿ ಕ್ಲೌಡ್ ಆ್ಯಂಡ್ ಇನ್ಫ್ರಾಸ್ಟ್ರಕ್ಚರ್ ಮ್ಯಾನೇಜರಾಗಿ ಉದ್ಯೋಗದಲ್ಲಿರುವ ಹನೀಫ್ ಪುತ್ತೂರು ಯು.ಎ.ಇ ಗೋಲ್ಡನ್ ವೀಸಾ ಹೊಂದಿದ್ದು,ಎಂ. ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್- ಮಂಗಳೂರು ಇದರ ಸಹಯೋಗದೊಂದಿಗೆ ಗ್ರಾಮೀಣ ಮಕ್ಕಳಿಗಾಗಿ ಕಾರ್ಯಾಚರಿಸುತ್ತಿರುವ ಉಚಿತ ಕಂಪ್ಯೂಟರ್ ಬಸ್ – ಕ್ಲಾಸ್ ಆನ್ ವೀಲ್ಸ್ ಇದರ ರೂವಾರಿ.
ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.