ಬಂಟ್ವಾಳ (www.vknews.in) : ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾವು ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭಾನುವಾರ ಸಂಚರಿಸಿತು. ಕಾರ್ಯಕ್ರಮದ ನೋಡೆಲ್ ತಾಲೂಕು ಆರೋಗ್ಯ ಅಧಿಕಾರಿ ಡಾ.ಅಶೋಕ್ ಕುಮಾರ್ ರೈ ಅವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ತಳಿಗೆ ಹಾರಾರ್ಪಣೆ ಗೈದರು.
ಗ್ರಾಮ ಪಂಚಾಯತ್ ಪಂಚಾಯತ್ ಸದಸ್ಯರಾದ ಕೆ.ಶ್ರೀಧರ್ ರೈ, ಲತೀಫ್ ನೇರಳಕಟ್ಟೆ, ಪ್ರೇಮ, ಲಕ್ಷ್ಮೀ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನುಷಾ ಡಿ. ಸಂವಿಧಾನ ಪೀಠಿಕೆ ಬೋಧಿಸಿದರು.
ಸಂವಿಧಾನದ ತತ್ವ, ಆಶಯದಂತೆ ಸರ್ಕಾರವು ಜನಸಾಮಾನ್ಯರಿಗೆ ಮೂಲ ಸೌಕರ್ಯ, ಸವಲತ್ತುಗಳನ್ನು ನೀಡುತ್ತಿರುವ ಮತ್ತು ಅದನ್ನು ಯಾವ ರೀತಿ ಪಡೆಯಬೇಕು ಎಂಬುದರ ಬಗ್ಗೆ ಗಿರೀಶ್ ನಾವಡ ಮತ್ತು ತಂಡದವರು ಬೀದಿ ನಾಟಕದ ಮೂಲಕ ಜಾಗೃತಿ ಮೂಡಿಸಿದರು. ಪಂಚಾಯತ್ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.