ಬಂಟ್ವಾಳ (Www.vknews.in) ; ದಕ್ಷಿಣ ಕನ್ನಡ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ಬಂಟ್ವಾಳ ಹೋಬಳಿ ಅಧ್ಯಕ್ಷರಾಗಿ ಪತ್ರಕರ್ತ ಗೋಪಾಲ ಅಂಚನ್ ಆಯ್ಕೆಯಾಗಿದ್ದಾರೆ.
ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಅಧ್ಯಕ್ಷರ ಅನುಮತಿಯಂತೆ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಅವರ ಶಿಫಾರಸ್ಸಿನಂತೆ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ ಅವರು ಈ ನೇಮಕಾತಿ ಮಾಡಿದ್ದಾರೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾಗಿರುವ ಗೋಪಾಲ ಅಂಚನ್ ಅವರು ಹಿರಿಯ ಪತ್ರಕರ್ತರಾಗಿ, ಕಲಾವಿದರಾಗಿ, ಲೇಖಕರಾಗಿ, ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ, ಕಾರ್ಯಕ್ರಮ ನಿರೂಪಕರಾಗಿದ್ದು ವಿವಿಧ ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯ, ಸಾಂಸ್ಕ್ರತಿಕ, ಧಾರ್ಮಿಕ ಸಂಘಟನೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ. ಇವರ ಹಲವಾರು ಕೃತಿಗಳು ಪ್ರಕಟಗೊಂಡಿರುವುದಲ್ಲದೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ, ಗಡಿನಾಡ ಕನ್ನಡ ಸಮ್ಮೇಳನ, ತುಳು ಸಾಹಿತ್ಯ ಸಮ್ಮೇಳನ, ರಾಜ್ಯ ಮಟ್ಟದ ಅಕ್ಷರೋತ್ಸವ ಮೊದಲಾದ ಕಾರ್ಯಕ್ರಮಗಳನ್ನು ಸಂಘಟಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.