(www.vknews. in) ಹೃದಯ ಪುನಶ್ಚೇತನ ಕೌಶಲ್ಯ ಅತ್ಯಗತ್ಯ- ಡಾ|| ಕಿಶನ್ ರಾವ್ ಬಾಳಿಲ , ಗೃಹರಕ್ಷಕರಿಗೆ ಹೃದಯ ಪುನಶ್ಚೇತನ ತರಬೇತಿ ಶಿಬಿರ
ದಿನಾಂಕ 13-02-2024ನೇ ಮಂಗಳವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿ ಮೇರಿಹಿಲ್ ಮಂಗಳೂರು ಇಲ್ಲಿ ಗೃಹರಕ್ಷಕರಿಗೆ ಹೃದಯ ಪುನಶ್ಚೇತನ ಕೌಶಲ್ಯ ತರಬೇತಿ ಶಿಬಿರ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಲಯನ್ ಶೀನ ಪೂಜಾರಿ, ಅಧ್ಯಕ್ಷರು, ಲಯನ್ಸ್ ಕ್ಲಬ್ ಮಂಗಳೂರು ಮತ್ತು ಡಾ|| ಮಹಾಲಿಂಗ ಶರ್ಮ ಸಂಪತ್ತಿಲ, ಹಿರಿಯ ಬಾಯಿ, ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕರು ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ ಜನರ ಜೀವ ಉಳಿಸಲು ಗೃಹರಕ್ಷಕರನ್ನು ತರಬೇತಿಗೊಳಿಸಿ ಅವರನ್ನು ಜೀವರಕ್ಷಕರನ್ನಾಗಿ ತಯಾರಿಸುವ ನಿಟ್ಟಿನಲ್ಲಿ ಈ ತರಬೇತಿಯನ್ನು ಆಯೋಜಿಸಲಾಗಿದೆ. ಅಪಘಾತ ಅಥವಾ ಇನ್ನಾವುದೇ ಅವಘಡಗಳಾದಾಗ ತಕ್ಷಣವೇ ಸ್ಪಂದಿಸಲು ಈ ತರಬೇತಿ ಗೃಹರಕ್ಷಕರಿಗೆ ಅನುಕೂಲವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಯ ವೈದ್ಯರಾದ ಜನರಲ್ ಸರ್ಜನ್ ಡಾ|| ಕಿಶನ್ ರಾವ್ ಬಾಳಿಲ ಇವರು ಶಿಬಿರವನ್ನು ನಡೆಸಿಕೊಟ್ಟರು.ಅವರು ಮಾತನಾಡಿ ಹ್ರದಯ ಪುನಶ್ಚೇತನ ಕೌಶಲ್ಯ ತರಭೇತಿ ಎಲ್ಲರಿಗೂ ದೊರಕಬೇಕು.ಸಾಮಾನ್ಯ ಮನುಷ್ಯರೂ ತುರ್ತು ಸಂದರ್ಬಗಳಲ್ಲಿ ಜೀವ ಉಳಿಸಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಗ್ರಹರಕ್ಷಕರಿಗೆ ನೀಡುವ ತರಭೇತಿ ಸ್ವಾಗತಾರ್ಹ ಎಂದು ನುಡಿದರು. ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಮಂಗಳೂರು ಇದರ ಜೊತೆ ಕಾರ್ಯದರ್ಶಿಯಾದ ಶ್ರೀ ದಿನಕರ್ ಕೋಟ್ಯಾನ್ ಮತ್ತು ಜೊತೆ ಕೋಶಾಧಿಕಾರಿ ಶ್ರೀ ನಾರಾಯಣ ಕೋಟ್ಯಾನ್ ಉಪಸ್ಥಿತರಿದ್ದರು. ಗೃಹರಕ್ಷಕ, ಗೃಹರಕ್ಷಕಿಯರು ಈ ಶಿಬಿರದಲ್ಲಿ ಭಾಗವಹಿಸಿ ತರಬೇತಿಯನ್ನು ಪಡೆದುಕೊಂಡರು.
ಹ್ರದಯ ಪುನಶ್ಚೇತನ ಕೌಶಲ್ಯ ತರಭೇತಿ ನಿರಂತರ ನಡೆಯ ಬೇಕು…ಡಾ ಮಹಾಲಿಂಗ ಶರ್ಮಾ.
ಗ್ರಹ ರಕ್ಷಕರ ಸಮಾಜ ಮುಖಿ ಸೇವೆಗೆ ಲಯನ್ಸ್ ಕ್ಲಬ್ ಮಂಗಳೂರು ನಿರಂತರ ಸಹಾಯ ನೀಡಿದೆ ಮತ್ತು ಮುಂದೆಯೂ ನೀಡಲಿದೆ….ಲಯನ್ ಸೀನ ಪೂಜಾರಿ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.