ಕಲಬುರಗಿ (www.vknews.in) : ಕಲಬುರಗಿಯ ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿ ಮಹಿಳೆಯೋರ್ವರು ಎರಡು ವರ್ಷದ ಮಗಳನ್ನು ಕೊಂದು, ಬಳಿಕ ತಾನು ನೇಣಿಗೆ ಶರಣಾದ ಘಟನೆ ನಡೆದಿದೆ. ತಾಯಿ ಶಿವಲೀಲಾ ಹಾಗೂ ಮಗಳು ವರ್ಷಿತಾ ಮೃತಪಟ್ಟವರು.
ಮಹಿಳೆ ಗಂಡನ ಮನೆಯವರ ಕಿರುಕುಳ ತಾಳದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ . ಕೆರೋಳಿ ಗ್ರಾಮದಲ್ಲಿನ ತವರು ಮನೆ ಸೇರಿದ್ದ ಶಿವಲೀಲಾ ಎರಡು ದಿನಗಳ ಹಿಂದಷ್ಟೇ ಗಂಡನ ಮನೆಗೆ ಬಂದಿದ್ದರು.
ಮೂರು ವರ್ಷದ ಹಿಂದೆ ಮರಪಳ್ಳಿ ಗ್ರಾಮದ ಆನಂದ ಜೊತೆ ಮದುವೆಯಾಗಿ ನೆಮ್ಮದಿಯಾಗಿದ್ದ ಶಿವಲೀಲಾ ದಿನಕಳೆದಂತೆ ಗಂಡನ ಕಿರುಕುಳಕ್ಕೆ ಬೇಸತ್ತಿದ್ದರು ಅನ್ನೋ ಆರೋಪ ಕೇಳಿ ಬಂದಿದೆ. ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.