ಇಸ್ಲಾಮಾಬಾದ್ (www.vknews.in) | ಪಾಕಿಸ್ತಾನದ ಯುವ ಟೆನಿಸ್ ಆಟಗಾರ್ತಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಝೈನಬ್ ಅಲಿ ನಖ್ವಿ (17) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಐಟಿಎಫ್ ಜೂನಿಯರ್ ಪಂದ್ಯಾವಳಿಗೆ ಮುಂಚಿತವಾಗಿ ತರಬೇತಿ ಅವಧಿಯ ನಂತರ ತನ್ನ ಕೋಣೆಗೆ ಬಂದ ಝೈನಬ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಮಂಗಳವಾರ ಮುಂಜಾನೆ ಈ ಘಟನೆ ನಡೆದಿದೆ. ಕೋಣೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಸೈನಾಬಾ ಅವರನ್ನು ತಕ್ಷಣ ಇಸ್ಲಾಮಾಬಾದ್ ನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಹೃದಯಾಘಾತವೇ ಸಾವಿಗೆ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ. ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಯಿತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.