ಲಕ್ನೋ (www.vknews.in) ; ಉತ್ತರ ಪ್ರದೇಶದಲ್ಲಿ ಪಟಾಕಿ ಸಿಡಿಸುವ ವೇಳೆ ಭಾರೀ ಸ್ಫೋಟ ಉಂಟಾಗಿದೆ. ಚಿತ್ರಕೂಟದಲ್ಲಿ ನಡೆದ ಬುಂದೇಲ್ಖಂಡ ಗೌರವ ಮಹೋತ್ಸವದ ವೇಳೆ ಅಪಘಾತದಲ್ಲಿ ನಾಲ್ವರು ಮಕ್ಕಳು ದುರಂತ ಅಂತ್ಯ ಕಂಡಿದ್ದಾರೆ. ಅನೇಕ ಜನರು ಗಾಯಗೊಂಡರು. ಈ ಘಟನೆ ಗುರುವಾರ (15.02.2024) ಬೆಳಗ್ಗೆ ನಡೆದಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಹಬ್ಬದ ನಿಮಿತ್ತ ಪಟಾಕಿ ಸಿಡಿಸುವ ವೇಳೆ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದ ತನಿಖೆಗಾಗಿ ಹೆಚ್ಚುವರಿ ಮಹಾನಿರ್ದೇಶಕರ ಶ್ರೇಣಿಯ ಅಧಿಕಾರಿಯ ನೇತೃತ್ವದ ಉನ್ನತ ಮಟ್ಟದ ತನಿಖಾ ಸಮಿತಿಗೆ ಆದೇಶಿಸಿದ್ದಾರೆ. ಮೃತರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಲಾಗಿದೆ.
ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಬುಂದೇಲ್ಖಂಡ್ ಗೌರವ ಮಹೋತ್ಸವ ನಡೆಯುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪ್ರಯಾಗರಾಜ್ ವಲಯ ಹೆಚ್ಚುವರಿ ಮಹಾನಿರ್ದೇಶಕ ಭಾನು ಭಾಸ್ಕರ್ ತಿಳಿಸಿದ್ದಾರೆ. ವಿಧಿವಿಜ್ಞಾನ ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್) ತಂಡವು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.