ರಾಮನಗರ (www.vknews.in) : ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ಮಹಿಳಾ ಕಾನ್ಸ್ಟೇಬಲ್ ಒಬ್ಬರು ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಮಂಜುಶ್ರೀ (27) ಆತ್ಮಹತ್ಯೆ ಮಾಡಿಕೊಂಡ ಕಾನ್ಸ್ಟೇಬಲ್ ಆಗಿದ್ದಾರೆ.
ಬೆಂಗಳೂರಿನ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದ ಇವರು ಇತ್ತೀಚೆಗಷ್ಟೇ ನಿಯೋಜನೆಯಡಿ ಶಿವಾಜಿನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಘಟನಾ ಸ್ಥಳಕ್ಕೆ ಹಾರೋಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.