(www.vknews. in)ಬಂಟ್ವಾಳ : ಎಸ್ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಪಕ್ಷ ಸಮಾವೇಶ
ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಫೆಬ್ರವರಿ 23 ರಂದು ಪಾಣೆಮಂಗಳೂರು – ಆಲಡ್ಕದ ಎಸ್.ಎಸ್ ಆಡಿಟೋರಿಯಂ ನಲ್ಲಿ ಪಕ್ಷದ ಸಮಾವೇಶ ನಡೆಯಲಿದೆ.
ಎಸ್ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ತುಂಬೆ ಮುಖ್ಯ ಭಾಷಣ ಮಾಡಲಿದ್ದಾರೆ. ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಕಡಂಬು, ಅಕ್ಬರ್ ಅಲಿ ಪೋನ್ನೋಡಿ, ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು, ಜಿಲ್ಲಾ ಸಮಿತಿ ಸದಸ್ಯರಾದ ಯೂಸುಫ್ ಆಲಡ್ಕ, ಬಶೀರ್ ಬೊಳ್ಳಾಯಿ, ವಿಮ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ, ವಿಮ್ ಜಿಲ್ಲಾಧ್ಯಕ್ಷೆ ನೌರಿನ್ ಆಲಂಪಾಡಿ ಹಾಗೂ ಎಸ್ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಮೂನಿಷ್ ಆಲಿ ಮೊದಲಾದವರು ಭಾಗವಹಿಸಲಿದ್ದಾರೆ.
ಪಕ್ಷದ ಕಾರ್ಯಕರ್ತರು, ಹಿತೈಷಿಗಳು, ಬೆಂಬಲಿಗರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಜೊತೆ ಕಾರ್ಯದರ್ಶಿ ಅಶ್ರಫ್ ತಲಪಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.