ಹೈದರಾಬಾದ್ (www.vknews.in) : ಮದುವೆಗೂ ಮುನ್ನ ತನ್ನ ನಗುವನ್ನು ಇನ್ನಷ್ಟು ಸುಂದರಗೊಳಿಸಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವಕನೊಬ್ಬ ದುರಂತ ಅಂತ್ಯ ಕಂಡಿದ್ದಾನೆ. ಮೃತರು 28 ವರ್ಷದ ಲಕ್ಷ್ಮೀ ನಾರಾಯಣ ವಿಂಜಮ್. ಹೈದರಾಬಾದ್ ನಲ್ಲಿ ಈ ಘಟನೆ ನಡೆದಿದೆ.
ಹೈದರಾಬಾದ್ನ ಜುಬಿಲಿ ಹಿಲ್ಸ್ನಲ್ಲಿರುವ ಎಫ್ಎಂಎಸ್ ಇಂಟರ್ನ್ಯಾಶನಲ್ ಡೆಂಟಲ್ ಕ್ಲಿನಿಕ್ನಲ್ಲಿ ‘ಸ್ಮೈಲ್ ಡಿಸೈನಿಂಗ್’ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಯುವಕ ಸಾವನ್ನಪ್ಪಿದ್ದಾನೆ ಎಂದು ಎನ್ಡಿಟಿವಿ ವರದಿ ಮಾಡಿದೆ. ಫೆಬ್ರವರಿ 16 ರಂದು ಈ ಘಟನೆ ನಡೆದಿದೆ.
ಲಕ್ಷ್ಮಿ ನಾರಾಯಣ ಅವರ ಸಾವಿಗೆ ಅತಿಯಾದ ಅರಿವಳಿಕೆ ಕಾರಣ ಎಂದು ಅವರ ತಂದೆ ರಾಮುಲು ವಿಂಜಂ ಆರೋಪಿಸಿದ್ದಾರೆ. ಚಿಕಿತ್ಸೆ ವೇಳೆ ಯುವಕ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ ಎಂದು ಸಿಬ್ಬಂದಿ ತಿಳಿಸಿದ್ದಾರೆ. ಕೂಡಲೇ ಅವರನ್ನು ಬೇರೆ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ ಎಂದು ರಾಮುಲು ಹೇಳಿದ್ದಾರೆ.
ಶಸ್ತ್ರ ಚಿಕಿತ್ಸೆ ಬಗ್ಗೆ ಮಗ ತನಗೆ ಏನನ್ನೂ ಹೇಳಿಲ್ಲ ಎಂದು ರಾಮುಲು ಹೇಳಿದ್ದಾರೆ. ಮಗನಿಗೆ ಬೇರೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ಮಗನ ಸಾವಿಗೆ ವೈದ್ಯರೇ ಕಾರಣ ಎಂದು ಆರೋಪಿಸಿದರು. ಸಂಬಂಧಿಕರ ದೂರಿನ ಮೇರೆಗೆ ಪೊಲೀಸರು ಕ್ಲಿನಿಕ್ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ಆಸ್ಪತ್ರೆಯ ದಾಖಲೆಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.