ಬಂಟ್ವಾಳ (www.vknews.in) : ಮುಡಿಪು ಜಂಕ್ಷನ್ನಲ್ಲಿ ಶುಕ್ರವಾರ ಮಧ್ಯಾಹ್ನ ವೇಳೆ ರಸ್ತೆ ದಾಟುತ್ತಿದ್ದ ವೇಳೆ ವ್ಯಕ್ತಿಯೋರ್ವರು ಕಾರು ಢಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ನಡೆದಿದೆ. ಬಂಟ್ವಾಳ ಕರೋಪಾಡಿ ನಿವಾಸಿ ಸಿದ್ದಿಖ್ (48) ಮೃತಪಟ್ಟವರು. ಗಲ್ಫ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದ ಅವರು ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು.
ಸದ್ಯ ದೇರಳಕಟ್ಟೆ ಫ್ಲಾಟ್ ನಲ್ಲಿ ನೆಲೆಸಿರುವ ಸಿದ್ದೀಖ್ ಶುಕ್ರವಾರದ ಜುಮಾ ನಮಾಝ್ ಅನ್ನು ಕರೋಪಾಡಿ ಮಸೀದಿಯಲ್ಲಿ ನಿರ್ವಹಿಸಿ, ಅಲ್ಲಿಂದ ದೇರಳಕಟ್ಟೆಗೆ ಬರುವ ದಾರಿ ಮಧ್ಯೆ ಮುಡಿಪು ಜಂಕ್ಷನ್ನಲ್ಲಿ ಇಳಿದು, ಎಟಿಎಂನಿಂದ ಹಣ ತೆಗೆದು, ಅಲ್ಲಿಂದ ವಾಪಸ್ಸು ರಸ್ತೆ ದಾಟಿ ಬಸ್ಸನ್ನೇರಲು ಹೊರಟಾಗ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ತಲೆ ಭಾಗಕ್ಕೆ ಗಂಭೀರ ಗಾಯಗೊಂಡ ಸಿದ್ದೀಖ್ ಅವರನ್ನು ನಾಟೆಕಲ್ ಕಣಚೂರು ಆಸ್ಪತ್ರೆಗೆ ದಾಖಲಿಸುವ ದಾರಿಮಧ್ಯೆ ಅವರು ಮೃತಪಟ್ಟಿದ್ದಾರೆ.
ಮುಂದಿನ ವಾರ ಮತ್ತೆ ಉದ್ಯೋಗ ನಿಮಿತ್ತ ಸಿದ್ದೀಖ್ ಅವರು ಗಲ್ಫ್ ರಾಷ್ಟ್ರಕ್ಕೆ ಮರಳುವವರಿದ್ದರು. ಮೃತರು ತಂದೆ, ತಾಯಿ, ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.