ಮುಂಬೈ (www.vknews.in) | ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ನ್ಯಾಯಾಲಯ ವಾರಂಟ್ ಹೊರಡಿಸಿದೆ. ಮುಂಬೈನ ವಿಶೇಷ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಪ್ರಜ್ಞಾ ಸಿಂಗ್ ಠಾಕೂರ್ ಅವರು ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ಕೋರಿದ್ದರು.
2008ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಠಾಕೂರ್ ಆರೋಪಿಯಾಗಿದ್ದು, ಈ ಸ್ಫೋಟದಲ್ಲಿ ಏಳು ಮಂದಿ ಮೃತಪಟ್ಟು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಮೊನ್ನೆ ಬಿಜೆಪಿ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಅವರ ಹೆಸರು ಇರಲಿಲ್ಲ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.