ಮಂಗಳೂರು (www.vknews.in) : ದಕ್ಷಿಣ ಕನ್ನಡ ಜಿಲ್ಲೆಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ಗೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ. ಆ ಕುರಿತು ಮಂಗಳೂರಿನಲ್ಲಿ ಪ್ರತಿಕ್ರಿಯಸಿರುವ ಸಂಸದರು, ಭಾವುಕರಾರದರು. ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸುವುದು ನಮ್ಮ ಪಕ್ಷದ ವಿಶೇಷತೆ. ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲಾ ಯೋಚನೆ ಮಾಡಿ ಆಯ್ಕೆ ಮಾಡುತ್ತಾರೆ. ಅವರ ಆಯ್ಕೆಯನ್ನು ಸ್ವಾಗತಿಸುತ್ತೇನೆ ಎಂದರು.
ಪಕ್ಷವು ನಿಂತ ನೀರಾಗಬಾರದು. ಹೊಸಬರು ಬರುತ್ತಾ ಇರಬೇಕು. ಚಲಾವಣೆ ಆಗುತ್ತಾ ಇರಬೇಕು. ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ನಾವೆಲ್ಲಾ ಬದ್ಧರಾಗಿರುತ್ತೇವೆ. ಯಾರೇ ಅಭ್ಯರ್ಥಿ ಆದರೂ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂಬುದು ನಮ್ಮ ಗುರಿ. ರಾಷ್ಟ್ರೀಯ ನಾಯಕರ ಯೋಚನೆಗಳಿಗೆ ಬದ್ಧರಾಗಿ ಕೆಲಸ ಮಾಡುವವರು ನಾವು ಎಂದು ನಳಿನ್ ಹೇಳಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.