ಬಂಟ್ವಾಳ (www.vknews.in) : ದ್ವಿಚಕ್ರ ವಾಹನವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಸವಾರನೋರ್ವ ಮೃತಪಟ್ಟ ಘಟನೆ ಮಂಗಳವಾರ ಮುಂಜಾವಿನ ವೇಳೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾರಿಪಳ್ಳದಲ್ಲಿ ನಡೆದಿದೆ. ಅಮ್ಟಾಡಿ ನಿವಾಸಿ ಅಕ್ಷಿತ್ (25) ಎಂಬಾತ ಮೃತಪಟ್ಟ ಅವಿವಾಹಿತ ಯುವಕ.
ಅಕ್ಷಿತ್ ಅವರು ಮಂಗಳೂರಿನ ಖಾಸಗಿ ಕಂಪೆನಿಯಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದು, ಕೆಲಸ ಮುಗಿಸಿ ಬರುವಾಗ ಅಂದಾಜು 4.30 ರ ವೇಳೆಗೆ ಮಾರಿಪಳ್ಳ ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆದಾಗಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮುಂಜಾವಿನ ವೇಳೆ ನಿದ್ದೆಯ ಮಂಪರಿನಲ್ಲಿ ಅಥವಾ ಇನ್ನಾವುದೇ ಕಾರಣದಿಂದ ಅಪಘಾತ ಸಂಭವಿಸಿದೆ ಎಂಬುದು ಇನ್ನು ತನಿಖೆಯ ವೇಳೆ ತಿಳಿಯಬೇಕಾಗಿದೆ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.