ಕೋಲಾರ ( ವಿಶ್ವ ಕನ್ನಡಿಗ ನ್ಯೂಸ್ ): ಭಾರತ ಚುನಾವಣಾ ಆಯೋಗವು ಇಂದಿನಿಂದ ಚುನಾವಣಾ ನೀತಿ ಸಂಹಿತೆ ಜಾರಿ ಮಾಡಲಿದ್ದು, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿ/ಸಿಬ್ಬಂದಿಗಳು ಕಡ್ಡಾಯವಾಗಿ ತಮಗೆ ನಿಯೋಜಿಸಲ್ಪಟ್ಟ ಕ್ಷೇತ್ರಗಳಲ್ಲಿ ಕರ್ತವ್ಯಕ್ಕೆ ಹಾಜರಾಗಲು ಮಾನ್ಯ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ಅವರು ಸೂಚಿಸಿದ್ದಾರೆ. ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇಂದಿನಿಂದ ಕೇಂದ್ರ ಸ್ಥಾನದಲ್ಲಿ ಲಭ್ಯವಿದ್ದು, ಯಾವುದೇ ಚುನಾವಣಾ ಸಂಬಂಧಿತ ತರಬೇತಿ ಅಥವಾ ಸಭೆಯನ್ನು ಆಯೋಜಿಸಿದ 30 ನಿಮಿಷಗಳೊಳಗೆ ಸಭೆಗೆ ಹಾಜರಾಗಲು ಸಿದ್ಧರಾಗಿರುವಂತೆ ಅವರು ಸೂಚಿಸಿದ್ದಾರೆ.
ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿ ಚುನಾವಣಾ ಕರ್ತವ್ಯ ನಿರ್ವಹಿಸಲು ವಿಫಲರಾದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ-1951 ರನ್ವಯ ಶಿಸ್ತುಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ಆಸ್ಪದ ಕೊಡದಂತೆ ಚುನಾವಣೆಗೆ ನಿಯೋಜಿತ ಅಧಿಕಾರಿ/ಸಿಬ್ಬಂದಿಗಳು ಲೋಕಸಭಾ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ತಮ್ಮ ನಿಯೋಜಿತ ಕರ್ತವ್ಯವನ್ನು ಪಾಲಿಸಲು ಸೂಚಿಸಿ ಆದೇಶ ಹೊರಡಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.