ಬೆಂಗಳೂರು (www.vknews.in) ; ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಮಿಳುನಾಡು ಜನರ ವಿರುದ್ಧ ದ್ವೇಷಪೂರಿತ ಹೇಳಿಕೆ ನೀಡಿದ್ದಕ್ಕಾಗಿ ಕ್ಷಮೆಯಾಚಿಸಿದ್ದಾರೆ, ಆದರೆ ಕೇರಳದ ಬಗ್ಗೆ ತಮ್ಮ ಹೇಳಿಕೆಗೆ ಮೌನವಾಗಿದ್ದಾರೆ. ತಮಿಳುನಾಡಿನಿಂದ ಭಯೋತ್ಪಾದಕ ತರಬೇತಿ ಪಡೆದವರು ಬೆಂಗಳೂರಿಗೆ ಬಂದು ಸ್ಫೋಟ ನಡೆಸಿರುವ ಹೇಳಿಕೆಗೆ ಶೋಭಾ ಕರಂದ್ಲಾಜೆ ಕ್ಷಮೆಯಾಚಿಸಿದ್ದಾರೆ.
ಶೋಭಾ ಕರಂದ್ಲಾಜೆ ಅವರು ತಮಿಳುನಾಡು ಜನರನ್ನು ಒಟ್ಟಾರೆಯಾಗಿ ಗುರಿಯಾಗಿಸಿಕೊಂಡಿಲ್ಲ ಮತ್ತು ರಾಮೇಶ್ವರಂ ಕೆಫೆ ಸ್ಫೋಟ ನಡೆಸಿದವರು ಕೃಷ್ಣಗಿರಿ ಅರಣ್ಯದಿಂದ ಭಯೋತ್ಪಾದಕ ತರಬೇತಿ ಪಡೆದಿದ್ದಾರೆ ಎಂದು ಹೇಳಿಕೆಯನ್ನು ಹಿಂಪಡೆಯುತ್ತಿರುವುದಾಗಿ ವಿವರಿಸಿದರು.
ಪ್ರತಿಭಟನೆ ತೀವ್ರಗೊಂಡಾಗ ಶೋಭಾ ಕರಂದ್ಲಾಜೆ ಅವರು ತಮಿಳುನಾಡಿನ ಜನರ ಬಗ್ಗೆ ಮಾಡಿದ ಹೇಳಿಕೆಗೆ ಕ್ಷಮೆಯಾಚಿಸಿದರು. ಆದರೆ, ‘ಕೇರಳದ ಮಂದಿ ಕರ್ನಾಟಕದ ಹೆಣ್ಣುಮಕ್ಕಳ ಮುಖಕ್ಕೆ ಆ್ಯಸಿಡ್ ಸುರಿಯುತ್ತಿದ್ದಾರೆ’ ಎಂಬ ಕೇರಳದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದನ್ನು ಶೋಭಾ ಕರಂದ್ಲಾಜೆ ಹಿಂತೆಗೆದುಕೊಳ್ಳಲಿಲ್ಲ.
‘‘ತಮಿಳುನಾಡಿನಿಂದ ಒಬ್ಬ ವ್ಯಕ್ತಿ ಬಂದು ಕೆಫೆಯಲ್ಲಿ ಬಾಂಬ್ ಇಟ್ಟಿದ್ದ. ಮತ್ತೊಬ್ಬ ವ್ಯಕ್ತಿ ದೆಹಲಿಯಿಂದ ಬಂದು ವಿಧಾನಸಭೆಯಲ್ಲಿ ಪಾಕ್ ಪರ ಘೋಷಣೆ ಕೂಗುತ್ತಾನೆ. ಮತ್ತೊಬ್ಬ ಕೇರಳದಿಂದ ಬಂದು ಕಾಲೇಜು ವಿದ್ಯಾರ್ಥಿಗಳ ಮೇಲೆ ಆಸಿಡ್ ಸುರಿದಿದ್ದಾನೆ. ಈ ಬಗ್ಗೆ ಕಾಂಗ್ರೆಸ್ ಸರ್ಕಾರ ಏನೂ ಮಾಡುತ್ತಿಲ್ಲ. ಬೆಂಗಳೂರಿನಲ್ಲಿ ಹನುಮಾನ್ ಚಾಲೀಸಾ ಪಠಿಸುವವರ ಮೇಲೆ ಹಲ್ಲೆ ನಡೆದಿದೆ ಎಂದು ಶೋಭಾ ಆರೋಪಿಸಿದ್ದರು.
ಬೆಂಗಳೂರು ನಗರದ ಹಲಸೂರಿನಲ್ಲಿ ಮಸೀದಿ ಎದುರು ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ವೇಳೆ ಕೆಲವು ಆಂಗ್ಲ ಮಾಧ್ಯಮಗಳೊಂದಿಗೆ ಮಾತನಾಡಿದ ಶೋಭಾ ವಿವಾದಾತ್ಮಕ ಮಾತುಗಳನ್ನಾಡಿದ್ದಾರೆ.
ಇದೇ ವೇಳೆ ಶೋಭಾ ಹೇಳಿಕೆ ವಿರುದ್ಧ ಚುನಾವಣಾ ಆಯೋಗದ ಮೊರೆ ಹೋಗುವುದಾಗಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಹೇಳಿದ್ದಾರೆ. ಶೋಭಾ ಕರಂದ್ಲಾಜೆ ಅವರ ವಿವಾದಾತ್ಮಕ ಹೇಳಿಕೆಯನ್ನು ಬಿಜೆಪಿ ವಿರುದ್ಧ ಅಸ್ತ್ರವಾಗಿಸಲು ಡಿಎಂಕೆ ಸಿದ್ಧತೆ ನಡೆಸಿದೆ. ಚುನಾವಣಾ ಆಯೋಗ ಕ್ರಮ ಕೈಗೊಳ್ಳದೆ ಏನು ಮಾಡುತ್ತಿದೆ ಎಂದು ಡಿಎಂಕೆ ಸಂಸದ ಪಿ ವಿಲ್ಸನ್ ಪ್ರಶ್ನಿಸಿದ್ದಾರೆ. ಈ ವಿಚಾರವಾಗಿ ಎಐಎಡಿಎಂಕೆ ಕೂಡ ಶೋಭಾ ವಿರುದ್ಧ ಹರಿಹಾಯ್ದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.