ಬೀಜಿಂಗ್ (www.vknews.in) | ಉತ್ತರ ಚೀನಾದ ಶಾಂಕ್ಸಿ ಪ್ರಾಂತ್ಯದಲ್ಲಿ ಪ್ರಯಾಣಿಕರ ಬಸ್ ಸುರಂಗ ಗೋಡೆಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 14 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 37 ಮಂದಿ ಗಾಯಗೊಂಡಿದ್ದಾರೆ. ಮುಂಜಾನೆ 2.37 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಾಂಕ್ಸಿಯ ಹೋಹೋಟ್-ಬೀಹೈ ಎಕ್ಸ್ಪ್ರೆಸ್ ಹೈವೇಯಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ಸಿನಲ್ಲಿ 51 ಪ್ರಯಾಣಿಕರಿದ್ದರು. ಬಸ್ ಸುರಂಗದ ಗೋಡೆಗೆ ಡಿಕ್ಕಿ ಹೊಡೆದಾಗ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಗೊಂಡವರ ಆರೋಗ್ಯ ಸ್ಥಿತಿಯ ಬಗ್ಗೆ ಅಧಿಕಾರಿಗಳು ಯಾವುದೇ ವಿವರಗಳನ್ನು ಬಿಡುಗಡೆ ಮಾಡಿಲ್ಲ. ಅಪಘಾತದ ಕಾರಣವನ್ನು ಕಂಡುಹಿಡಿಯಲು ತನಿಖೆಯನ್ನು ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.