(www.vknews.in) : ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯತ್ತಡ್ಕದಲ್ಲಿ 9 ತಿಂಗಳ ಮಗುವಿನೊಂದಿಗೆ ತಾಯಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಕಳೆಂಜ ಗ್ರಾಮದ ಕಾರ್ಯತ್ತಡ್ಕ ನಿವಾಸಿ ವೆಂಕಪ್ಪ ಗೌಡರ ಪತ್ನಿ ಜಯಶ್ರೀ (29) ಹಾಗೂ ಅವರ ಪುತ್ರಿ ರುಷಿಕಾ( 9 ತಿಂಗಳು) ನಾಪತ್ತೆಯಾದವರು.
ಮಾ.22 ರಂದು ರಾತ್ರಿ ಜಯಶ್ರೀ ರೂಮಿನಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ಮಲಗಿದ್ದು, ವೆಂಕಪ್ಪ ಗೌಡ ಅವರು ಮನೆಯ ಹಾಲ್ ನಲ್ಲಿ ಮಲಗಿದ್ದರು. ಮರುದಿನ ಬೆಳಿಗ್ಗೆ ವೆಂಕಪ್ಪಗೌಡರು ಎದ್ದು ನೋಡಿದಾಗ ಪತ್ನಿ ಹಾಗೂ 9 ತಿಂಗಳ ಮಗು ರುಷಿಕಾ ನಾಪತ್ತೆಯಾಗಿದ್ದರೆನ್ನಲಾಗಿದೆ. ಈ ಬಗ್ಗೆ ವೆಂಕಪ್ಪಗೌಡ ಕೊಟ್ಟ ದೂರಿನಂತೆ ಧರ್ಮಸ್ಥಳ ಪೊಲೀಸ್ ರಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.