ಲಕ್ನೋ (www.vknews.in) : ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ತಾಯಿ ಮತ್ತು ಮೂವರು ಮಕ್ಕಳು ದಾರುಣ ಅಂತ್ಯ ಕಂಡಿದ್ದಾರೆ. ಉತ್ತರ ಪ್ರದೇಶದ ದೇವ್ರಿಯಾ ಜಿಲ್ಲೆಯ ದುಮ್ರಿ ಗ್ರಾಮದಲ್ಲಿ ಈ ದಾರುಣ ಘಟನೆ ನಡೆದಿದೆ. ಶನಿವಾರ ಬೆಳಗ್ಗೆ ಆಹಾರ ತಯಾರಿಸುವಾಗ ಈ ಅವಘಡ ಸಂಭವಿಸಿದೆ.
ಸಿಲಿಂಡರ್ ಸ್ಫೋಟಗೊಂಡ ನಂತರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಪಘಾತದ ನಂತರ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ ಎಂದು ದೇವ್ರಿಯಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸಂಕಲ್ಪ್ ಶರ್ಮಾ ತಿಳಿಸಿದ್ದಾರೆ. ಮಹಿಳೆ ಮತ್ತು ಆಕೆಯ ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.
ಶಬ್ಧ ಕೇಳಿ ಸ್ಥಳದಲ್ಲಿ ಅಪಾರ ಜನ ಜಮಾಯಿಸಿದರು. ಪೊಲೀಸರು ಹಾಗೂ ಫೋರೆನ್ಸಿಕ್ ಅಧಿಕಾರಿಗಳು ಮನೆಗೆ ಆಗಮಿಸಿ ಪರಿಶೀಲನೆ ನಡೆಸಿದರು. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.