ಪೋರ್ಟ್ಲ್ಯಾಂಡ್ (www.vknews.in) ; ಅಮೆರಿಕದಲ್ಲಿ ನಡೆದ ಅಪಘಾತದಲ್ಲಿ ಭಾರತೀಯ ಮಹಿಳೆ, ಮಗಳು ಸಾವನ್ನಪ್ಪ್ಪಿದ್ದಾರೆ. ಮೃತರನ್ನು ಆಂಧ್ರಪ್ರದೇಶ ಮೂಲದ ಕಮದಮ್ ಗೀತಾಂಜಲಿ (32) ಮತ್ತು ಅವರ ಪುತ್ರಿ ಹನಿಕಾ (5) ಎಂದು ಗುರುತಿಸಲಾಗಿದೆ. ಗೀತಾಂಜಲಿಯ ಪತಿ ನರೇಶ್ ಮತ್ತು ಮಗ ಬ್ರಮನ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗೀತಾಂಜಲಿ ಅವರ ಪುತ್ರಿ ಹನಿಕಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಶೀಘ್ರದಲ್ಲೇ ಸಾವು ಖಚಿತವಾಯಿತು. ಮಗನ ಕಾಲು ಮುರಿತವಾಗಿದ್ದು, ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.
ಅಮೆರಿಕದ ಪೋರ್ಟ್ಲ್ಯಾಂಡ್ನಲ್ಲಿ ಭಾನುವಾರ ಬೆಳಗ್ಗೆ ಈ ದುರ್ಘಟನೆ ನಡೆದಿದೆ. ಮಹಿಳೆಯ ಹುಟ್ಟುಹಬ್ಬದಂದು ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದಾಗ ಈ ಅವಘಡ ಸಂಭವಿಸಿದೆ. ಗೀತಾಂಜಲಿಯ 32ನೇ ಹುಟ್ಟುಹಬ್ಬದಂದು ಇಡೀ ಕುಟುಂಬ ದೇವಸ್ಥಾನಕ್ಕೆ ತೆರಳಿತ್ತು. ಮಹಿಳೆ ವಾಹನ ಚಲಾಯಿಸುತ್ತಿದ್ದಳು.
ಸೌತ್ ಮೆರಿಡಿಯನ್ ರಸ್ತೆಯಲ್ಲಿ ಸಾಗುತ್ತಿದ್ದಾಗ ರಸ್ತೆಯಲ್ಲಿದ್ದ ಸ್ಟಾಪ್ ಸಿಗ್ನಲ್ ಅನ್ನು ನಿರ್ಲಕ್ಷಿಸಿ ಮುಂದೆ ಸಾಗಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅವರ ಕಾರು 18 ವರ್ಷದ ಯುವಕ ಚಲಾಯಿಸುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಗೀತಾಂಜಲಿ ಮತ್ತು ಅವರ ಪತಿ, ಸಾಫ್ಟ್ವೇರ್ ಎಂಜಿನಿಯರ್ ಕಳೆದ 10 ವರ್ಷಗಳಿಂದ ಯುಎಸ್ನಲ್ಲಿ ವಾಸಿಸುತ್ತಿದ್ದಾರೆ. ಆಂಧ್ರಪ್ರದೇಶದಲ್ಲಿರುವ ಅವರ ಸಂಬಂಧಿಕರು ಮೃತದೇಹಗಳನ್ನು ಮನೆಗೆ ತರಲು ಪ್ರಯತ್ನಿಸುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.