ಜೈಪುರ (www.vknews.in) | ದೇಶದಲ್ಲಿ ಸಂವಿಧಾನವನ್ನು ಮತ್ತೆ ಬರೆಯುವ ಪಿತೂರಿ ನಡೆಯುತ್ತಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ಹೇಳಿದ್ದಾರೆ. ಮೋದಿ ಸರ್ಕಾರದಿಂದ ದೇಶ ತೀವ್ರ ನಿರಾಶೆಗೊಂಡಿದೆ ಮತ್ತು ಬಿಜೆಪಿ ಪ್ರಜಾಪ್ರಭುತ್ವವನ್ನು ನಾಶಪಡಿಸಿದೆ ಎಂದು ಸೋನಿಯಾ ಗಾಂಧಿ ಆರೋಪಿಸಿದರು.
ಮೋದಿಯವರ ಸರ್ವಾಧಿಕಾರವನ್ನು ಕೊನೆಗೊಳಿಸುವ ಹೋರಾಟದಲ್ಲಿ ಎಲ್ಲರೂ ಒಟ್ಟಾಗಿ ನಿಲ್ಲಬೇಕು ಎಂದು ಸೋನಿಯಾ ಗಾಂಧಿ ಹೇಳಿದರು. ಜೈಪುರದಲ್ಲಿ ನಡೆದ ಕಾಂಗ್ರೆಸ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಮೋದಿ ಮತ್ತು ಬಿಜೆಪಿ ದೇಶ ಮತ್ತು ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿವೆ. ತಮ್ಮನ್ನು ತಾವು ಶ್ರೇಷ್ಠರೆಂದು ಹೇಳಿಕೊಳ್ಳುವ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವವನ್ನು ಛಿದ್ರಗೊಳಿಸುತ್ತಿದ್ದಾರೆ. ಇದು ಬಿಜೆಪಿ ಆಡಳಿತವನ್ನು ಕೊನೆಗೊಳಿಸುವ ಸಮಯ” ಎಂದು ಸೋನಿಯಾ ಗಾಂಧಿ ಹೇಳಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.