ಶಿಡ್ಲಘಟ್ಟ (ವಿಶ್ವ ಕನ್ನಡಿಗ ನ್ಯೂಸ್ ) ; ಕರ್ನಾಟಕದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನ ಗಳಿಸಿದ್ದೇವೆ, ಅದೇ ರೀತಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 20ಕ್ಕೂ ಅಧಿಕ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಪಕ್ಷವು ಕರ್ನಾಟಕದಿಂದ ವಿಜಯ ಯಾತ್ರೆಯನ್ನು ಆರಂಭಿಸಲಿದೆ ಎಂದು ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ ವಿ ಗೌತಮ್ ವಿಶ್ವಾಸ ವ್ಯಕ್ತಪಡಿಸಿದರು.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕುರುಡುಮಲೆ ಶ್ರೀ ವಿನಾಯಕ ದೇವಸ್ಥಾನ ಹಾಗೂ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ನಡೆದುಕೊಂಡಿದೆ ಕರ್ನಾಟಕದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ ಬಿಜೆಪಿ ನಾಯಕರು ಕೇವಲ ಸುಳ್ಳಿನ ಪ್ರಚಾರದಲ್ಲಿ ತೊಡಗಿದ್ದು ಜನ ಇವರ ಆಟವನ್ನು ನೋಡಿದ್ದಾರೆ ಲೋಕಸಭಾ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪಕ್ಷದ ಕೈ ಹಿಡಿಯುವ ವಿಶ್ವಾಸವನ್ನು ಹೊಂದಿದ್ದೇನೆ ಎಂದರು.
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಒಮ್ಮೆ ಅವಕಾಶ ಮಾಡಿಕೊಟ್ಟರೆ ಪ್ರತಿಯೊಬ್ಬರ ಮನೆ ಮಗನಾಗಿ ಸೇವೆ ಸಲ್ಲಿಸಲು ಸಂಕಲ್ಪ ಮಾಡಿದ್ದೇನೆ ಕ್ಷೇತ್ರದಲ್ಲಿ ನಿರುದ್ಯೋಗಿ ಯುವಕರಿಗೆ ಉದ್ಯೋಗ, ಶಾಶ್ವತ ನೀರಾವರಿ ಯೋಜನೆ ಮತ್ತು ಮಹಿಳೆಯರಿಗೆ ಸ್ವಾವಲಂಬಿಯಾಗಿ ಜೀವನ ನಡೆಸಲು ಕೈಗಾರಿಕೆಗಳನ್ನು ಸ್ಥಾಪಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಕ್ಷೇತ್ರವನ್ನು ಅಭಿವೃದ್ಧಿಗೊಳಿಸಲು ಅನೇಕ ರೀತಿಯ ಕನಸುಗಳನ್ನು ಕಂಡಿದ್ದು ಅದನ್ನು ನನಸು ಮಾಡಲು ಬೆಂಬಲಿಸಬೇಕೆಂದು ಮನವಿ ಮಾಡಿದರು.
ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಮಾತನಾಡಿ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ಚಿತವಾಗಿದ್ದು ಶಿಡ್ಲಘಟ್ಟ ಕ್ಷೇತ್ರದಲ್ಲಿ ಅತ್ಯಧಿಕ ಮತಗಳನ್ನು ಹಾಕಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಕ್ಷೇತ್ರದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಯುವಕರಿಗೆ ಒಂದು ಅವಕಾಶ ಕಲ್ಪಿಸಬೇಕೆಂದು ವಿನಂತಿಸಿದರು.
ವರದಿ: ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.