ಮುಂಬೈ (www.vknews.in) | ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಮೇಲೆ ಇಬ್ಬರು ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮುಂಬೈನ ಬಾಂದ್ರಾದಲ್ಲಿರುವ ಅವರ ನಿವಾಸದಲ್ಲಿ ಈ ದಾಳಿ ನಡೆದಿದೆ. ಇಂದು ಮುಂಜಾನೆ 5 ಗಂಟೆಗೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಗುಂಡು ನಟನ ನಿವಾಸದ ಮೊದಲ ಮಹಡಿಗೆ ಅಪ್ಪಳಿಸಿತು. ವಿದೇಶಿ ಪಿಸ್ತೂಲ್ ಬಳಸಿ ಈ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.