ವಿಜಯಪುರ (www.vknews.in) : ವಿಜಯಪುರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚುನಾವಣಾ ಕರ್ತವ್ಯ ನಿರತ ಕೊಲ್ಹಾರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಆರೋಗ್ಯದಲ್ಲಿ ಏರುಪೇರಾಗಿ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.
ಕೊಲ್ಹಾರ ಠಾಣೆಯ ಇಬ್ರಾಹಿಂಸಾಬ್ ಅವಟಿ (44) ಸಾವಿಗೀಡಾದ ಹೆಡ್ ಕಾನ್ಸ್ಪೆಬಲ್. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಲ್ಹಾರ ಠಾಣೆ ವ್ಯಾಪ್ತಿಯಲ್ಲಿ ಫ್ಲಾಯಿಂಗ್ ಸ್ಕ್ವಾಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಈ ವೇಳೆ ಏಕಾಏಕಿಯಾಗಿ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ತಕ್ಷಣವೇ ಅವರನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.