(www.vknews.in) ; ಕಣಚೂರು ಮಹಿಳಾ ಪದವಿಪೂರ್ವ ಕಾಲೇಜು ದೇರಳಕಟ್ಟೆ ಇದರ 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ಲಭಿಸಿದ್ದು, ಪರೀಕ್ಷೆಗೆ ಹಾಜರಾದ ಒಟ್ಟು 218 ವಿದ್ಯಾರ್ಥಿನಿಯರಲ್ಲಿ 87 ವಿದ್ಯಾರ್ಥಿನಿಯರು ಅತ್ಯುತ್ತಮ ಶ್ರೇಣಿಯಲ್ಲಿ, 127 ವಿದ್ಯಾರ್ಥಿನಿಯರು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ (PCMB) 46 ವಿದ್ಯಾರ್ಥಿನಿಯರು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಶಾಜ್ಮಿ ಫಾತಿಮಾ 576 (96%),ನಾಝಿಯಾ 572(95.3%), ಅಂಕಗಳನ್ನು ಗಳಿಸಿರುತ್ತಾರೆ. ವಾಣಿಜ್ಯ ವಿಭಾಗದ ಕಂಪ್ಯೂಟರ್ ಸೈನ್ಸ್ (ಗಣಕ ವಿಜ್ಞಾನ) ವಿಭಾಗದಲ್ಲಿ 32 ವಿದ್ಯಾರ್ಥಿನಿಯರು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಸೆಫಿಯತುಲ್ ಅನ್ಸೀರ 575 (95.83 %) , ಎಸ್ ಫಾತೀಮಾ ಆಫಾ 566 (94.33%) ಅಂಕ ಗಳಿಸಿರುತ್ತಾರೆ.
ವಾಣಿಜ್ಯವಿಭಾಗದಲ್ಲಿ (HEBA) 04 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಆಯಿಷತುಲ್ ತಾಬೀಬ 544(90.66%) ಸನಾ ಲತೀಫಾ 535(89.16%)ಅಂಕಗಳನ್ನು ಗಳಿಸಿರುತ್ತಾರೆ . ಕಲಾ ವಿಭಾಗದಲ್ಲಿ 05 ವಿದ್ಯಾರ್ಥಿನಿಯರು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಸನಾ ಮರಿಯಮ್ 566 (94.33%), ಹುದಾ ಇಬ್ರಾಹಿಂ 559(93.16) ಅಂಕಗಳನ್ನು ಗಳಿಸಿರುತ್ತಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.