ಮಂಡ್ಯ (www.vknews.in) : ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಪರ ತಾಲ್ಲೂಕಿನ ವಿವಿಧೆಡೆ ಚಲನಚಿತ್ರ ನಟ ದರ್ಶನ್ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.
ಬೆಳಿಗ್ಗೆ 9.30 ಗಂಟೆಗೆ ಹಲಗೂರಿನಿಂದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಜೊತೆಗೂಡಿ ಚುನಾವಣಾ ಪ್ರಚಾರ ಆರಂಭಿಸುವ ದರ್ಶನ್, ನಂತರ ಹುಸ್ಕೂರು, ಹಾಡ್ಲಿ ಸರ್ಕಲ್, ಮಳವಳ್ಳಿ ಪಟ್ಟಣ, ಬೆಳಕವಾಡಿ, ಬೊಪ್ಪೇಗೌಡನಪುರ, ಸರಗೂರು ಹ್ಯಾಂಡ್ ಪೋಸ್ಟ್, ಪೂರಿಗಾಲಿ, ಟಿ.ಕಾಗೇಪುರ(ತಳಗವಾದಿ), ಬಂಡೂರು, ಹಿಟ್ಟನಹಳ್ಳಿ ಕೊಪ್ಪಲು, ಮಿಕ್ಕೆರೆ, ಕಿರುಗಾವಲು ಸಂತೆಮಾಳ, ಚನ್ನಪಿಳ್ಳೆಕೊಪ್ಪಲು ಗ್ರಾಮಗಳಲ್ಲಿ ಪ್ರಚಾರ ನಡೆಸಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.